Priyank Kharge

ಅವರಿಗೆ ಕೊರೋನಾ ಬಂದಿದೆ, ದೂರ ಉಳಿಯಲು ಹೇಳಿ: ಸದನದಲ್ಲಿ ಗೊಂದಲ ಸೃಷ್ಟಿಸಿದ ಪ್ರಿಯಾಂಕ್ ಖರ್ಗೆ ಕೊರೋನಾ ರಿಪೋರ್ಟ್!
ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕೊರೋನಾ ವೈದ್ಯಕೀಯ ವರದಿ ವಿಚಾರ ಶುಕ್ರವಾರ ವಿಧಾನಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಹಿತ ಕಾಯುವಲ್ಲಿ ಸರ್ಕಾರ ವಿಫಲ: ಕಾಂಗ್ರೆಸ್ ಆರೋಪ
ಶಾಲೆಗಳನ್ನು ಪುನಾರಾರಂಭಿಸಲು ಸೂಕ್ತವಾದ ರೋಡ್ ಮ್ಯಾಪ್ ರೂಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಹಣ ಲೂಟಿ ಮಾಡುವುದರಲ್ಲಿ ಮಗ್ನವಾದ ರಾಜ್ಯಸರ್ಕಾರ- ಪ್ರಿಯಾಂಕ್ ಖರ್ಗೆ ಕಿಡಿ
ಕೊರೋನಾ ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ನೀಡಬೇಕಿದ್ದ ರಾಜ್ಯ ಸರ್ಕಾರ, ಹಣ ಲೂಟಿ ಹೊಡೆಯುವುದರಲ್ಲಿ ಮಗ್ನವಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಜಿಎಸ್‌ಟಿ ಪಾಲು ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿ ಸಂಸದರು, ಸಚಿವರಿಗೆ ಇಲ್ಲವೇ: ಪ್ರಿಯಾಂಕ ಖರ್ಗೆ
ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದ ಪಾಲನ್ನು ಪಡೆದುಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಆದರೆ ಈ ಬಗ್ಗೆ ತುಟಿಕ್ ಪಿಟಿಟ್ ಎನ್ನದೇ, ರಾಜ್ಯದ ಮುಖ್ಯಮಂತ್ರಿ, ಸಚಿವರು ಜನರಿಗೆ ಮೋಸ ಮಾಡುತ್ತಿದ್ದಾರೆ.

ಪಕ್ಕದ ಮನೆಯವರಿಗೆ ಕೊರೋನಾ; ಸ್ವಯಂ ನಿರ್ಬಂಧ ಹೇರಿಕೊಂಡ ಪ್ರಿಯಾಂಕ್ ಖರ್ಗೆ
ಪಕ್ಕದ ಮನೆಯವರೆಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸ್ವಯಂ ನಿರ್ಬಂಧ ಹೇರಿಕೊಂಡಿದ್ದಾರೆ.

25 ಸಂಸದರಿದ್ದರೂ ಶ್ರಮಿಕ್ ರೈಲು ಬಿಡಿಸಲಾಗಿಲ್ಲ: ಪ್ರಿಯಾಂಕ್ ಖರ್ಗೆ ಟೀಕೆ
ರಾಜ್ಯದಲ್ಲಿ 25 ಸಂಸದರಿದ್ದರೂ ಕೂಲಿ ಕಾರ್ಮಿಕರನ್ನು ಕರೆತರಲು ಶ್ರಮಿಕ್ ರೈಲು ವ್ಯವಸ್ಥೆ ಮಾಡಿಲ್ಲ. ಅಲ್ಲದೇ, ಬಸ್ಸು ಪ್ರಯಾಣ ಸೇವೆ ಕೂಡಾ ಉಚಿತವಾಗಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ

ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಪ್ರಿಯಾಂಕ್ ಖರ್ಗೆ ತಿರುಗೇಟು
ಬಿಜೆಪಿ ನಾಯಕರಿಂದ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಶರತ್. ಬಿ ಅವರ ವರ್ಗಾವಣೆ ಪ್ರಹಸನ ಕುರಿತು ಬಿಜೆಪಿ ನಾಯಕರಿಗೆ ಅವರದೇ ಧಾಟಿಯಲ್ಲಿ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ

ಕೊವಿಡ್-19 ವೈದ್ಯಕೀಯ ಪರೀಕ್ಷಾ ವರದಿ ಮೊದಲು ದೆಹಲಿಗೇಕೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆ
ರಾಜ್ಯದಲ್ಲಿ ನಡೆಯುತ್ತಿರುವ ಕೊರೋನಾ ಶಂಕಿತರ ವೈದ್ಯಕೀಯ ಪರೀಕ್ಷಾ ವರದಿ ಮೊದಲು ದೆಹಲಿಗೆ ಏಕೆ ನೀಡಲಾಗುತ್ತಿದೆ? ಎಂದು ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

'ದೇಶ ಸಶಕ್ತವಾಗುತ್ತಿರುವುದು ಭಗವದ್ಗೀತೆ, ಕುರಾನ್, ಬೈಬಲ್ ನಿಂದ ಅಲ್ಲ, ಸಂವಿಧಾನದಿಂದ'
ದೇಶ ಸಶಕ್ತ ವಾಗುತ್ತಿರುವುದು ಭಗವದ್ಗೀತೆ, ಕುರಾನ್, ಬೈಬಲ್ ನಿಂದ ಅಲ್ಲ. ಅದು ಸದೃಢ, ಸಶಕ್ತವಾಗಿರಲು ಕಾರಣ ಸಂವಿಧಾನ. ಆದರೆ ಸಂವಿಧಾನದ ಬಗ್ಗೆ, ಅಂಬೇಡ್ಕರ್ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಾರೆ.

