Priyanka Gandhi

ಜೀವ ರಕ್ಷಕ ಔಷಧಿ, ವೈದ್ಯಕೀಯ ಸಲಕರಣೆಗಳ ಮೇಲಿನ ಜಿಎಸ್'ಟಿ ರದ್ದುಪಡಿಸಿ: ಕೇಂದ್ರಕ್ಕೆ ಪ್ರಿಯಾಂಕಾ ಗಾಂಧಿ ಆಗ್ರಹ
ಕೊರೋನಾ ಸಾಂಕ್ರಾಮಿಕ ರೋಗ ವಿರುದ್ಧ ಹೋರಾಡಲು ಬಳಕೆ ಮಾಡುತ್ತಿರುವ ಔಷಧಿಗಳು, ವೈದ್ಯಕೀಯ ಸಲಕರಣೆಗಳ ಮೇಲಿನ ತೆರಿಗೆ ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಆಗ್ರಹಿಸಿದ್ದಾರೆ.

ಕೋವಿಡ್-19 ಪ್ರಭಾವದಿಂದ ತತ್ತರಿಸಿರುವ ಮಧ್ಯಮ ವರ್ಗಕ್ಕೆ ಪರಿಹಾರ ಕೋರಿ ಯುಪಿ ಮುಖ್ಯಮಂತ್ರಿಗೆ ಪ್ರಿಯಾಂಕಾ ಪತ್ರ!
ಖಾಸಗಿ ಆಸ್ಪತ್ರೆಗಳು ಜನರಿಂದ ದುಬಾರಿ ದರ ವಸೂಲಿ ಮಾಡದಂತೆ ಖಾತ್ರಿಗೊಳಿಸುವುದು, ಹಣದುಬ್ಬರ ನಿಯಂತ್ರಣ, ವ್ಯಾಪಾರಿಗಳಿಗೆ ಪರಿಹಾರದಂತಹ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅವರನ್ನು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

'ಇದು ಅಮಾನವೀಯ, ಅಪರಾಧ': ಗಂಗಾ ನದಿಯಲ್ಲಿ ತೇಲುತ್ತಿರುವ ಶವಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಪ್ರಿಯಾಂಕಾ ಗಾಂಧಿ ಆಗ್ರಹ
ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಶಂಕಿತ ಕೋವಿಡ್ ಶವಗಳು ತೇಲಿ ಬರುತ್ತಿರುವುದು ಅಮಾನವೀಯ ಮತ್ತು ಅಪರಾಧ ಎಂದಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು...

ಕೊರೋನಾ ಎರಡನೇ ಅಲೆ ನಿಯಂತ್ರಣದಲ್ಲಿ ಯೋಗಿ ಸರ್ಕಾರ ಸಂಪೂರ್ಣ ವಿಫಲ: ಪ್ರಿಯಾಂಕಾ ವಾದ್ರಾ
ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಕೊರೋನಾ ವೈರಸ್ ಸಂಖ್ಯೆಯನ್ನು ಮರೆಮಾಚುತ್ತಿದೆ: ಪ್ರಿಯಾಂಕಾ ಆರೋಪ
ಉತ್ತರ ಪ್ರದೇಶ ಸರ್ಕಾರ ಕೊರೋನಾ ಪ್ರಕರಣಗಳ ಸಂಖ್ಯೆಯನ್ನು ಮರೆಮಾಚುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ. ಸರ್ಕಾರ ಮೊದಲಿನಿಂದಲೂ ಜಾಗ್ರತೆ ವಹಿಸಿದ್ದರೆ ಜನರು ಇಂತಹ ಪರಿಸ್ಥಿತಿಯನ್ನು ನೋಡಬೇಕಾಗಿರಲಿಲ್ಲ ಎಂದಿದ್ದಾರೆ.

ಸಂಸತ್ ಚಳಿಗಾಲದ ಅಧಿವೇಶನ ನಡೆಸದ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ
ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸಂಸತ್ ಚಳಿಗಾಲದ ಅಧಿವೇಶನ ಹಮ್ಮಿಕೊಳ್ಳದಿರಲು ನಿರ್ಧರಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...

ಭತ್ತದ ಬೆಳೆಗೆ ಸೂಕ್ತ ಬೆಂಬಲ ಬೆಲೆ ನೀಡದಿದ್ದರೆ ತೀವ್ರ ಪ್ರತಿಭಟನೆ: ಯೋಗಿ ಸರ್ಕಾರಕ್ಕೆ ಪ್ರಿಯಾಂಕಾ ಎಚ್ಚರಿಕೆ
ರೈತರ ಭತ್ತದ ಬೆಳೆಗೆ ಸೂಕ್ತ ಖರೀದಿ ದರವನ್ನು ಉತ್ತರ ಪ್ರದೇಶ ಸರ್ಕಾರ ನಿಗದಿಪಡಿಸಬೇಕು ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ತೀವ್ರ ಪ್ರತಿಭಟನೆ ಕೈಗೊಳ್ಳಲಿದೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.

'ಪ್ರಿಯಾಂಕಾ ಮತ್ತು ರಾಹುಲ್ ಹೊಲದಲ್ಲಿರುವ ಎಲೆಗಳನ್ನು ನೋಡಿ ಬೆಳೆ ಗುರುತಿಸಿದರೆ ರಾಜಕೀಯ ನಿವೃತ್ತಿ'
ಕುರಿ ಮತ್ತು ಮೇಕೆ ನಡುವೆ ವ್ಯತ್ಯಾಸ ಗೊತ್ತಿಲ್ಲದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಕೃಷಿ ಮಸೂದೆ ವಿಚಾರದಲ್ಲಿ ರೈತರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಲೇವಡಿ ಮಾಡಿದ್ದಾರೆ.

ಹತ್ರಾಸ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವುದು ಮಹಿಳೆಯ ಕುಟುಂಬಸ್ಥರ ಬೇಡಿಕೆಯಾಗಿದೆ: ಪ್ರಿಯಾಂಕಾ ಗಾಂಧಿ
ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹಲವು ವಿಚಾರಗಳ ಕುರಿತು ಕುಟುಂಬಸ್ಥರ ಜೊತೆ ಚರ್ಚೆ ನಡೆಸಿದರು.

