probe

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮಾನವ ಹಕ್ಕುಗಳ ಆಯೋಗದಿಂದ ತನಿಖೆಗೆ ಕುಟುಂಬಸ್ಥರು ಮನವಿ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 2012ರಲ್ಲಿ ಅತ್ಯಾಚಾರವೆಸಗಿ ಹತ್ಯೆಗೀಡಾದ ಸೌಜನ್ಯಳ ಕುಟುಂಬಸ್ಥರು ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಪ್ರಕರಣದ ಮರುತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ಕೇರಳದಲ್ಲಿ ಜ್ವರ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ತನಿಖೆ
ಕೇರಳದಲ್ಲಿ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಜನರು ಎಚ್ಚರಿಕೆ ವಹಿಸುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮಂಗಳವಾರ ಸಲಹೆ ನೀಡಿದ್ದಾರೆ. ಪರಿಸ್ಥಿತಿಯ ನಿರಂತರ ನಿಗಾ ವಣೆಗಾಗಿ ಮೇಲ್ವಿಚಾರಣಾ ಘಟಕ ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣ ಕುರಿತು ಮತ್ತಷ್ಟು ತನಿಖೆ: ಗೃಹ ಸಚಿವ ಡಾ ಜಿ ಪರಮೇಶ್ವರ
ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕುರಿತು ಸರ್ಕಾರ ಮತ್ತಷ್ಟು ತನಿಖೆ ನಡೆಸಲಿದೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು.

ಕಲುಷಿತ ನೀರು ದುರ್ಘಟನೆ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ, ತನಿಖೆಗೆ ಆದೇಶ
ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೋ ಆ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೋಮವಾರ ಸೂಚನೆ ನೀಡಿದ್ದಾರೆ.

ಲಖನೌ ಕೋರ್ಟ್‌ನಲ್ಲಿ ಗುಂಡಿನ ದಾಳಿ: ತನಿಖೆಗೆ ಮೂವರು ಸದಸ್ಯರ ಎಸ್‌ಐಟಿ ರಚನೆ
ಉತ್ತರ ಪ್ರದೇಶದ ಲಖನೌ ಸಿವಿಲ್ ಕೋರ್ಟ್‌ನೊಳಗೆ ನಡೆದ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆಸಲು ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಯುಪಿ ಮುಖ್ಯಮಂತ್ರಿಗಳ ಕಚೇರಿ ಬುಧವಾರ ತಿಳಿಸಿದೆ.

ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ.

ನಕಲಿ ಮತದಾರರಿಂದ ಯತ್ನಾಳ್'ಗೆ ಗೆಲುವು: ತನಿಖೆಗೆ ಕಾಂಗ್ರೆಸ್ ಆಗ್ರಹ
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದಾರರಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಗೆಲುವು ಸಾಧಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್, ಈ ಬಗ್ಗೆ ತನಿಖೆ ನಡೆಸುವಂತೆ ಗುರುವಾರ ಆಗ್ರಹಿಸಿದೆ.

ಕಟೀಲ್ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದ ವ್ಯಕ್ತಿಗಳಿಗೆ ಪೊಲೀಸರಿಂದ ಥರ್ಡ್ ಡಿಗ್ರಿ ಟ್ರೀಟ್ಮೆಂಟ್: ಆಂತರಿಕ ತನಿಖೆಗೆ ಆದೇಶ
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಆಂತರಿಕ ತನಿಖೆಗೆ ಆದೇಶಿಸಲಾಗಿದೆ.

ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಬಳಿ ಡ್ರೋನ್ ಪತ್ತೆ, ತನಿಖೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಭದ್ರತಾ ಲೋಪ ಸಂಭವಿಸಿದೆ. ಇಲ್ಲಿನ ಸಿವಿಲ್ ಲೈನ್ಸ್ ನಲ್ಲಿರುವ ಮುಖ್ಯಮಂತ್ರಿ ನಿವಾಸದ ಬಳಿ ಡ್ರೋನ್ ಪತ್ತೆ ಮಾಹಿತಿ ಲಭಿಸಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

