probe

ಜಾರಕಿಹೊಳಿ ಸಿಡಿ ಪ್ರಕರಣ: ಮೂವರು ಅಧಿಕಾರಿಗಳ ವಿರುದ್ಧ ತನಿಖಾ ಆದೇಶಕ್ಕೆ ಹೈಕೋರ್ಟ್ ತಡೆ
ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದ ನಗರದ 8ನೆ ಎಸಿಎಂಎಂ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ಗುರುವಾರ ತಡೆ ನೀಡಿದೆ.

ಕೋರ್ಟ್ ಆದೇಶದಂತೆ ತನಿಖೆಗೆ ಸಹಕರಿಸುತ್ತೇನೆ: ಮುಂಬೈನಲ್ಲಿ ಪರಮ್ ಬೀರ್ ಸಿಂಗ್ ಹೇಳಿಕೆ
ಮುಂಬೈ ಕೋರ್ಟ್‌ನಿಂದ ಘೋಷಿತ ಅಪರಾಧಿ ಎಂದು ಕರೆಸಿಕೊಂಡಿರುವ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ನ್ಯಾಯಾಲಯದ ನಿರ್ದೇಶನದಂತೆ ತನಿಖೆಗೆ ಸಹಕಾರ ನೀಡಲು ಗುರುವಾರ ಮುಂಬೈಗೆ ಆಗಮಿಸಿದ್ದಾರೆ.

ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ವರ್ಷ 2600 ಗರ್ಭಪಾತ ಪ್ರಕರಣ ದಾಖಲು; ತನಿಖೆಗೆ ಆದೇಶ
ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 2,600 ಗರ್ಭಪಾತ ಪ್ರಕರಣಗಳು ದಾಖಲಾಗಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರು, ತನಿಖೆ ಆದೇಶಿಸಿದ್ದಾರೆ.

ಲಖಿಂಪುರ್ ಖೇರಿ ಹಿಂಸಾಚಾರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ಖರ್ಗೆ ಆಗ್ರಹ
ರೈತರು ಸೇರಿದಂತೆ 8 ಮಂದಿ ಸಾವಿಗೆ ಕಾರಣವಾಗಿರುವ ಲಖಿಂಪುರ್ ಖೇರಿ ಹಿಂಸಾಚಾರ ಘಟನೆ ಕುರಿತು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ಆಗ್ರಹಿಸಿದ್ದಾರೆ.

ಜಯನಗರ ವಾಣಿಜ್ಯ ಸಂಕೀರ್ಣ ಹಂಚಿಕೆ ಪ್ರಕರಣ: ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಆದೇಶ
ಜಯನಗರ ವಾಣಿಜ್ಯ ಸಂಕೀರ್ಣದಲ್ಲಿರುವ ಕೆಲ ಮಳಿಗೆಗಳನ್ನು ಟೆಂಡರ್ ಪ್ರಕ್ರಿಯೆ ನಡೆಸದೆ ಹಂಚಿಕೆ ಮಾಡಿರುವ ಪ್ರಕರಣವನ್ನು ಹೈಕೋರ್ಟ್ ಲೋಕಾಯುಕ್ತ ತನಿಖೆಗೆ ಸೋಮವಾರ ಆದೇಶಿಸಿದೆ.

ಸೋನು ಸೂದ್ ವಿರುದ್ಧದ ತನಿಖೆ ವಿಸ್ತರಿಸಿದ ಐಟಿ ಇಲಾಖೆ: ನಟನಿಗೆ ಸೇರಿದ ಮತ್ತಷ್ಟು ಪ್ರದೇಶಗಳ ಮೇಲೆ ದಾಳಿ!
ಬಾಲಿವುಡ್ ನಟ, ಸಮಾಜಸೇವಕ ಸೋನು ಸೂದ್ ಅವರ ವಿರುದ್ಧದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶುಕ್ರವಾರ ತನಿಖೆಯನ್ನು ವಿಸ್ತರಿಸಿದ್ದು, ನಟನಿಗೆ ಸೇರಿದ ಮತ್ತಷ್ಟು ಪ್ರದೇಶಗಳ ಮೇಲೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಅಕ್ರಮ ಗಣಿಗಾರಿಕೆಯಿಂದ ಮರಗಳ ನಾಶ: ಲೋಕಾಯುಕ್ತ ತನಿಖೆಗೆ 'ಹೈ' ಆದೇಶ
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಗುಂಡೇಹಳ್ಳಿಯಲ್ಲಿ 36 ಎಕರೆ ಗೋಮಾಳ ಜಮೀನಿನಲ್ಲಿ 9 ಸಾವಿರ ಹೆಚ್ಚು ಗಿಡ, ಮರಗಳ ಅಕ್ರಮ ಗಣಿಗಾರಿಕೆಗೆ ನಾಶಪಡಿಸಿದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಿ ಹೈಕೋರ್ಟ್ ಗುರುವಾರ ಆದೇಶಿಸಿದೆ.

ಕರ್ನಾಲ್ ಘಟನೆ ತನಿಖೆಗೆ ಆದೇಶಿಸಿದ ಹರಿಯಾಣ ಸರ್ಕಾರ; ಪ್ರತಿಭಟನೆ ಕೈಬಿಟ್ಟ ರೈತರು
ಐಎಎಸ್ ಅಧಿಕಾರಿಯ ವಿವಾದಾತ್ಮಕ ಹೇಳಿಕೆ ಮತ್ತು ರೈತರ ಮೇಲಿನ ಪೋಲಿಸ್ ಲಾಠಿ ಚಾರ್ಜ್ ಸೇರಿದಂತೆ ಕರ್ನಾಲ್ ಘಟನೆಯನ್ನು ಹರಿಯಾಣ ಸರ್ಕಾರ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ರೈತರು ತಮ್ಮ ಪ್ರತಿಭಟನೆಯನ್ನು ಹಿಂಪಡೆದುಕೊಂಡಿದ್ದಾರೆ.

ತುಮಕೂರು ಅತ್ಯಾಚಾರ-ಕೊಲೆ ಪ್ರಕರಣ: ತನಿಖೆಗಾಗಿ 15 ಸದಸ್ಯರ ತಂಡ ರಚನೆ
ತುಮಕೂರಿನ ಚೋಟಸಾಬರಪಾಳ್ಯದಲ್ಲಿ 30 ವರ್ಷದ ಮಹಿಳೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ 15 ಮಂದಿ ಸದಸ್ಯರ ತಂಡ ರಚಿಸಲಾಗಿದೆ.

