ದೇಶಅದಾನಿ ಗ್ರೂಪ್ ವಿರುದ್ಧ ಜೆಪಿಸಿ ತನಿಖೆಗೆ ಆಗ್ರಹ: ರಾಷ್ಟ್ರಪತಿ ಭವನಕ್ಕೆ ಪ್ರತಿಪಕ್ಷಗಳ ಮೆರವಣಿಗೆ, ಹಲವು ನಾಯಕರು ಪೊಲೀಸರ ವಶಕ್ಕೆ
ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರಪತಿ ಭವನದತ್ತ ಶುಕ್ರವಾರ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.