ರಾಜ್ಯಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಯೋಜನೆಗೆ ಚಾಲನೆ
ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಶುಕ್ರವಾರ ಚಾಲನೆ ನೀಡಿದರು.