ರಾಜ್ಯಅಲ್ಪಸಂಖ್ಯಾತರನ್ನು ಪಾಕಿಸ್ತಾನಿ ಎಂದು ಕರೆಯುವುದು ನಿಜವಾದ ಪ್ರಚೋದನೆ: ಮಂಗಳೂರು ಪೊಲೀಸ್ ಆಯುಕ್ತ
ಪ್ರಧಾನಿ ಮೋದಿಯವರ ಪ್ರಮಾಣ ವಚನ ಸ್ವೀಕಾರದ ಸಂಭ್ರಮಾಚರಣೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಮೆರವಣಿಗೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರನ್ನು ಪಾಕಿಸ್ತಾನಿಗಳೆಂದು ಬಣ್ಣಿಸಿ ನಿಂದಿಸಿರುವುದು ಬೋಳಿಯಾರ್ನಲ್ಲಿ ನಡೆದ ಚೂರಿ ಇರಿತ ಘಟನೆಗೆ ಕಾರಣವಾಗಿದೆ ಎಂದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಬುಧವಾರ ಹೇಳಿದ್ದಾರೆ.