PSI Recruitment

ಪಿಎಸ್ಐ ಮರುಪರೀಕ್ಷೆ ಸುಗಮವಾಗಿ ನಡೆದಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ಪಿಎಸ್ಐ 545 ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ ಸುಗಮವಾಗಿ ನಡೆದಿದೆ. ಮುಂದಿನ ಹಂತದಲ್ಲಿ 403 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುವುದು. ಈ ಎರಡೂ ನೇಮಕಾತಿ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಮತ್ತೆ 660 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಬುಧವಾರ ಹೇಳಿದರು.

PSI ಮರುಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು!
ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (PSI) ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಮರುಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ಆದರೆ ಸ್ವತಂತ್ರ ಸಂಸ್ಥೆ ಮೂಲಕ ಮರುಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.

ಪಿಎಸ್ ಐ ನೇಮಕಾತಿ ಮರು ಪರೀಕ್ಷೆ ನಡೆಸುವ ಬಗ್ಗೆ ಶೀಘ್ರದಲ್ಲಿ ತೀರ್ಮಾನ: ಗೃಹ ಸಚಿವ ಆರಗ ಜ್ಞಾನೇಂದ್ರ
ರದ್ದುಪಡಿಸಿರುವ ಪಿಎಸ್ ಐ ಪರೀಕ್ಷೆಯನ್ನು ಶೀಘ್ರದಲ್ಲಿಯೇ ಮತ್ತೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

