PSI scam

ಪಿಎಸ್‌ಐ ಹಗರಣ: ರಾಜ್ಯ ಸರ್ಕಾರಕ್ಕೆ ತನಿಖಾ ಸಮಿತಿ ವರದಿ ಸಲ್ಲಿಕೆ
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ತನಿಖೆಗಾಗಿ ರಚಿಸಲಾಗಿರುವ ನ್ಯಾಯಮೂರ್ತಿ ಬಿ ವೀರಪ್ಪ ಸಮಿತಿಯು ಸೋಮವಾರ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದ್ದು, ಸಿಐಡಿಗೆ ಹೆಚ್ಚಿನ ತನಿಖೆಗೆ ಶಿಫಾರಸು ಮಾಡಿದೆ.

ಪಿಎಸ್ಐ ಹಗರಣ: ಆರ್ ಡಿ. ಪಾಟೀಲ್ ವಿರುದ್ಧದ 11 ಎಫ್‌ಐಆರ್ ವಿಲೀನ ಕೋರಿಕೆ ಅರ್ಜಿ ವಜಾ
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ಕಿಂಗ್‌ಪಿನ್ ರುದ್ರಗೌಡ ಪಾಟೀಲ್ ಅಲಿಯಾಸ್ ಆರ್ ಡಿ ಪಾಟೀಲ್ ತನ್ನ ವಿರುದ್ಧ ವಿವಿಧ ಕಡೆ ದಾಖಲಾಗಿರುವ 11 ಎಫ್‌ಐಆರ್ ಮತ್ತು ಆರೋಪ ಪಟ್ಟಿಯನ್ನು ವಿಲೀನಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ನ ಕಲಬುರಗಿ ಪೀಠವು ವಜಾ ಮಾಡಿದೆ.

ನಿಗಮ ಮಂಡಳಿ ಪರೀಕ್ಷೆಯಲ್ಲಿ ಅಕ್ರಮ: 13 ಮಂದಿ ಬಂಧನ
ಪಿಎಸ್‍ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಯ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ವಿವಿಧ ನಿಗಮಗಳ ಖಾಲಿ ಹುದ್ದೆಗಳ ಪರೀಕ್ಷೆಯಲ್ಲೂ ಅಕ್ರಮಗಳು ಪತ್ತೆಯಾಗಿದೆ.

ಪಿಎಸ್‌ಐ ಹಗರಣ: ನ್ಯಾಯಾಂಗ ಆಯೋಗಕ್ಕೆ ಸಿಗದ ಸಹಕಾರ; ತನಿಖೆ ಪೂರ್ಣಗೊಳ್ಳದ ಹೊರತು ನೇಮಕವಿಲ್ಲ ಎಂದ ಸರ್ಕಾರ!
ಬಿಜೆಪಿ ಆಡಳಿತಾವಧಿಯಲ್ಲಿ ಬಯಲಾದ ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಏಕಸದಸ್ಯ ತನಿಖಾ ಆಯೋಗಕ್ಕೆ ಪ್ರತಿವಾದಿಗಳಿಂದ ಸೂಕ್ತ ಸಹಕಾರ ಸಿಗುತ್ತಿಲ್ಲ, ಹೀಗಾಗಿ ತನಿಖೆಗೆ ಅಡ್ಡಿಯಾಗಿದೆ.

ಪಿಎಸ್‌ಐ ನೇಮಕಾತಿ ಹಗರಣ: ನ್ಯಾಯಾಂಗ ತನಿಖೆಗೆ ಆದೇಶ, ನ್ಯಾ.ವೀರಪ್ಪ ನೇತೃತ್ವದ ಏಕ ಸದಸ್ಯ ಆಯೋಗ ರಚನೆ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್ಐ ನೇರ ನೇಮಕಾತಿಯಲ್ಲಿನ ಅಕ್ರಮಗಳ ಕುರಿತು ಎಲ್ಲಾ ಆಯಾಗಳಲ್ಲೂ ತನಿಖೆ ನಡೆಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಶುಕ್ರವಾರ ಆದೇಶಿಸಿದೆ.

ಪಿಎಸ್ಐ ನೇಮಕಾತಿ ಹಗರಣ: ಮರು ಪರೀಕ್ಷೆ ಸಾಧ್ಯತೆ ಕುರಿತು ಮಾಹಿತಿ ನೀಡಲು ಸರ್ಕಾರಕ್ಕೆ ಜುಲೈ 5ರವರೆಗೆ ಹೈಕೋರ್ಟ್ ಕಾಲಾವಕಾಶ
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷಾ ಅಕ್ರಮದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆ ಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸುವ ಸಾಧ್ಯತೆಯ ಬಗ್ಗೆ ಜುಲೈ 5ರೊಳಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಪಿಎಸ್‌ಐ ನೇಮಕಾತಿ ಹಗರಣ: ಅಮೃತ್ ಪೌಲ್ ನ್ಯಾಯಾಂಗ ಬಂಧನ ವಿಸ್ತರಣೆ: ಸಿಐಡಿಗೆ ಹೈಕೋರ್ಟ್ ನೋಟಿಸ್
ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ, ನ್ಯಾಯಾಂಗ ಬಂಧನದಲ್ಲಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಅಕ್ರಮವಾಗಿ ವಶದಲ್ಲಿ ಇಡಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಂಗಳವಾರ ಅಪರಾಧ ತನಿಖಾ ದಳಕ್ಕೆ (ಸಿಐಡಿ) ನೋಟಿಸ್ ಜಾರಿ ಮಾಡಿದೆ.

ಉತ್ತರ ಕನ್ನಡ: ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಆತ್ಮಹತ್ಯೆ
2022ರಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪಿಎಸ್‌ಐ ನೇಮಕಾತಿ ಹಗರಣದ ಆರೋಪಿಗಳಲ್ಲೊಬ್ಬರಾದ ಜಿಬಿ ಭಟ್ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣ; ಆರೋಪಿ ಹರೀಶ್‌ಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್
ಪಿಎಸ್‌ಐ ನೇಮಕಾತಿ ಹಗರಣದ ಆರೋಪಿ ಬ್ಯಾಡರಹಳ್ಳಿಯ ಕೆ.ಹರೀಶ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದರಿಂದ ಸಮಾಜಕ್ಕೆ ತಪ್ಪು ಸೂಚನೆ ನೀಡಿದಂತಾಗುತ್ತದೆ ಎಂದಿರುವ ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

