ದೇಶಮಣಿಪುರ: ಪಂಜಾಬ್ ನ್ಯಾಷನಲ್ ಬ್ಯಾಂಕ್ನಿಂದ 18 ಕೋಟಿ ರೂ. ಲೂಟಿ ಮಾಡಿದ ಶಸ್ತ್ರಸಜ್ಜಿತ ಡಕಾಯಿತರು!
ಮಣಿಪುರದ ಉಖ್ರುಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್ನ ಶಾಖೆಯೊಂದರಿಂದ ಮುಖಕ್ಕೆ ಮಾಸ್ಕ್ ಧರಿಸಿದ ಶಸ್ತ್ರಸಜ್ಜಿತ ಡಕಾಯಿತರು 18.80 ಕೋಟಿ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಕುರಿತು ಉಖ್ರುಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.