ರಾಜಕೀಯರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆ: ಬಹಿರಂಗ ಪ್ರಚಾರಕ್ಕಿಂದು ತೆರೆ
ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್'ಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣಾ ಬಹಿರಂಗ ಪ್ರಚಾರವು ಭಾನುವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಕ್ಷೇತ್ರಕ್ಕೆ ಸಂಬಂಧಪಡದವರು ಹೊರ ನಡೆಯಬೇಕು ಎಂದು ಚುನಾವಣಾ ಆಯೋಗವು ನಿರ್ದೇಶನ ನೀಡಿದೆ.