ರಾಜ್ಯಸುವರ್ಣಸೌಧಕ್ಕೆ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರಿಸಲು ಕ್ರಮ ವಹಿಸಿ: ಬಿ.ಎಸ್.ಯಡಿಯೂರಪ್ಪ
ರಾಜ್ಯ ಮಟ್ಟದ ಹಲವಾರು ಸರ್ಕಾರಿ ಕಚೇರಿಗಳನ್ನು ಒಂದು ತಿಂಗಳಲ್ಲಿ ಗುರುತಿಸಿ ಬೆಂಗಳೂರಿನಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಗತವಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.