ರಾಜ್ಯಪಿಯುಸಿ ಇಂಗ್ಲಿಷ್ ಪರೀಕ್ಷೆ: ವಲಸೆ ಕಾರ್ಮಿಕರ ಮಕ್ಕಳು, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಿಶೇಷ ವ್ಯವಸ್ಥೆ!
ಇದೇ ತಿಂಗಳ 18ರಂದು ನಡೆಯಲಿರುವ ಪಿಯುಸಿ ಇಂಗ್ಲಿಷ್ ಪತ್ರಿಕೆ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿನಿಲಯ ವಾಸಿಯಾಗಿದ್ದ ವಿದ್ಯಾರ್ಥಿಗಳು ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ತಮಗೆ ಸನಿಹವಾಗುವ ಪರೀಕ್ಷಾ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.