Pulwama attack

ಬಾಲಕೋಟ್ ದಾಳಿಗೆ ಒಂದು ವರ್ಷ: ಅಂದು ಏನಾಯ್ತು, ಭಾರತ ದಾಳಿ ಮಾಡಿದ್ದೇಕೆ?
ಅದು 2019, ಫೆಬ್ರವರಿ 26, ನಸುಕಿನ ಹೊತ್ತು. ಭಾರತೀಯ ವಾಯುಪಡೆಯ ಯುದ್ಧವಿಮಾನ ಪಾಕಿಸ್ತಾನದ ಖೈಬರ್ ಪಕ್ತುಂಕ್ವ ಪ್ರಾಂತ್ಯದಲ್ಲಿರುವ ಬಾಲಕೋಟ್ ನಲ್ಲಿ ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಶಿಬಿರ ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿತು.

ಯೋಧ ಗುರು ಸ್ಮಾರಕ ನಿರ್ಮಾಣಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್; 25 ಲಕ್ಷ ಹಣ ಬಿಡುಗಡೆ ಮಾಡಿದ ಸಿಎಂ ಬಿಎಸ್ ವೈ
ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ಮದ್ದೂರು ತಾಲ್ಲೂಕಿನ ಗುಡಿಗೆರೆಯ ಯೋಧ ಹೆಚ್.ಗುರು ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು 25 ಲಕ್ಷ ಹಣವನ್ನು ಬಿಡುಗಡೆ ಮಾಡಿದೆ.

ಎಲ್ ಇಟಿ, ಜೆಇಎಂ ಉಗ್ರರ ಬಗ್ಗೆ ರಾಹುಲ್ ಗೆ ಸಹಾನುಭೂತಿ- ಬಿಜೆಪಿ
ಕಳೆದ ವರ್ಷ ಇದೇ ದಿನ ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಪೈಶಾಚಿಕ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್ ಪಿಎಫ್ ಯೋಧರನ್ನು ಇಡೀ ದೇಶವೇ ಸ್ಮರಿಸುತ್ತಿದ್ದರೆ ಮತ್ತೊಂದೆಡೆ ಇದೇ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಣ ವಾಕ್ಸಮರ ನಡೆದಿದೆ.

ಪುಲ್ವಾಮ ದಾಳಿ ಹುತಾತ್ಮ ಯೋಧರಿಗೆ ಗೌರವ ಅರ್ಪಿಸಿದ ಸಿಆರ್ ಪಿಎಫ್
ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಕಳೆದ 2019ರ ಫೆಬ್ರವರಿ 14ರಂದು ನಡೆದಿದ್ದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಯೋಧರ ಸ್ಮರಣಾರ್ಥ ಸ್ಮಾರಕ ಸ್ತಂಭ ಸಮರ್ಪಣೆ ಮಾಡಿ ಕೇಂದ್ರ ಮೀಸಲು ಪೊಲೀಸ್ ಪಡೆ ಗೌರವ ಸಲ್ಲಿಸಿದೆ.

ಪುಲ್ವಾಮ ದಾಳಿಯಿಂದ ಹೆಚ್ಚು ಲಾಭ ಮಾಡಿಕೊಂಡಿದ್ದು ಯಾರು?: ಬಿಜೆಪಿಗೆ ರಾಹುಲ್ ಗಾಂಧಿ ಪ್ರಶ್ನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ದಾಳಿಯಲ್ಲಿ ಉಗ್ರರು ನಡೆಸಿದ್ದ ಭೀಕರ ದಾಳಿಯಲ್ಲಿ 40 ಮಂದಿ ವೀರ ಯೋಧರು ಹುತಾತ್ಮರಾಗಿದ್ದರು. ಈ ದುರ್ಘಟನೆ ನಡೆದು ಇಂದಿಗೆ 1 ವರ್ಷ ಕಳೆದಿದ್ದು ದಾಳಿ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿಗೆ 3 ಪ್ರಶ್ನೆಗಳನ್ನು ಕೇಳಿದ್ದಾರೆ.

ಪುಲ್ವಾಮ ದಾಳಿಯ ವೀರ ಯೋಧರ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ: ಗೃಹ ಸಚಿವ ರಾಜನಾಥ್ ಸಿಂಗ್
ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ತ್ಯಾಗ, ಬಲಿದಾನವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಪುಲ್ವಾಮಾ ಮಾದರಿ ದಾಳಿಗೆ ಪಾಕಿಸ್ತಾನ ಸಜ್ಜು, 27 ಉಗ್ರರಿಗೆ ಬಾಲಕೋಟ್ ನಲ್ಲಿ ತರಬೇತಿ: ಸ್ಫೋಟಕ ಮಾಹಿತಿ ಬಹಿರಂಗ
ಜಮ್ಮು-ಕಾಶ್ಮೀರದ ಪುಲ್ವಾಮಾ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಒಂದು ವರ್ಷವಾಗುತ್ತಾ ಬರುತ್ತಿರುವ ಸಂದರ್ಭದಲ್ಲಿ ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಬಾಲಕೋಟ್ ನಲ್ಲಿ ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಪುಲ್ವಾಮ ದಾಳಿಯಂತಹ ಘಟನೆಗಳು ಮಾತ್ರ ಜನರ ಮನಸ್ಥಿತಿ ಬದಲಿಸಬಹುದು: ಶರದ್ ಪವಾರ್ ವಿವಾದಾತ್ಮಕ ಹೇಳಿಕೆ
ಮಹಾರಾಷ್ಟ್ರ ಜನತೆ ಹಾಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶದಲ್ಲಿದ್ದು, ಪುಲ್ವಾಮ ದಾಳಿಯಂತಹ ಘಟನೆಗಳು ಮಾತ್ರ ಜನರ ಮನಸ್ಥಿತಿ ಬದಲಿಸಬಹುದು ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಪುಲ್ವಾಮಾ ದಾಳಿ ರೂವಾರಿಯ ಸಹಚರ ದೇಶಾದ್ಯಂತ ದಾಳಿ ಮಾಡಲು ಸಂಚು ರೂಪಿಸಿದ್ದ; ಎನ್ಐಎ ಸ್ಫೋಟಕ ವರದಿ
ಪುಲ್ವಾಮಾ ಭಯೋತ್ಪಾದಕ ದಾಳಿಯ ರೂವಾರಿ ಮುದಸ್ಸಿರ್ ಅಹ್ಮದ್ ಖಾನ್ ನ ನಿಕಟವರ್ತಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಸಜ್ಜಿದ್ ಅಹ್ಮದ್ ಖಾನ್ ದೆಹಲಿ-ಎನ್ ಸಿಆರ್ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಎಂದು ರಾಷ್ಟ್ರೀಯ ತನಿಖಾ ದಳ(ಎನ್ಐಎ) ತಿಳಿಸಿದೆ.

