Pulwama

ಪುಲ್ವಾಮಾ ಮಾದರಿ ಉಗ್ರರ ದಾಳಿ ಸಂಚು ವಿಫಲ: ಕಾರು ಮಾಲೀಕನ ಪತ್ತೆಹಚ್ಚಿದ ಪೊಲೀಸರು
ಸಿಆರ್'ಪಿಎಫ್ ವಾಹನಕ್ಕೆ ಸ್ಫೋಟಕ ತುಂಬಿದ್ದ ಕಾರು ಡಿಕ್ಕಿ ಹೊಡೆಸಿ 40 ಯೋಧರನ್ನು ಬಲಿಪಡೆದಿದ್ದ ಪುಲ್ವಾಮ ರೀತಿಯಲ್ಲಿಯೇ ಮತ್ತೊಂದು ಸಂಭಾವ್ಯ ದಾಳಿಯನ್ನು ಸೇನಾಪಡೆಗಳು ವಿಫಲಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಫೋಟಕ ತುಂಬಿದ್ದ ಕಾರಿನ ಮಾಲೀಕನನ್ನು ಪತ್ತೆಹಚ್ಚಿದ್ದಾರೆ.

ಪುಲ್ವಾಮದಲ್ಲಿ ಮತ್ತೊಮ್ಮೆ ದೊಡ್ಡಮಟ್ಟದ ದಾಳಿಗೆ ಉಗ್ರರ ಸಂಚು: ಯೋಧರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ದಾಳಿ ನಡೆಸಲು ಉಗ್ರರು ನಡೆಸಿದ್ದ ಸಂಚನ್ನು ಭಾರತೀಯ ಯೋಧರು ವಿಫಲಗೊಳ್ಳುವಂತೆ ಮಾಡಿದ್ದಾರೆ. ಬರೋಬ್ಬರಿ 20 ಕೆಜಿಗೂ ಹೆಚ್ಚು ತೂಕದ ಸುಧಾರಿತ ಸ್ಫೋಟಕ ಸಾಧನ (ಐಟಿಡಿ) ಹೊತ್ತು ಸಾಗುತ್ತಿದ್ದ ವಾಹನವನ್ನು ಭದ್ರತಾ ಪಡೆಗಳು ತಡೆದಿದ್ದು, ಈ ಮೂಲಕ ಭಾರೀ ಅನಾಹುತವೊಂದು ತಪ್ಪುವಂತೆ ಮಾಡಿದ್ದಾರೆ.

ಎನ್ ಕೌಂಟರ್ ನಲ್ಲಿ ಸಿಕ್ಕಿಹಾಕಿಕೊಂಡ ಹಿಜ್ ಬುಲ್ ಉನ್ನತ ಕಮಾಂಡರ್: ಕಾಶ್ಮೀರದಲ್ಲಿ ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ
ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆಯ ಉನ್ನತ ಕಮಾಂಡರ್ ರಿಯಾಜ್ ನೈಕೂ ಮತ್ತು ಮತ್ತೊಬ್ಬ ಭಯೋತ್ಪಾದಕ ಸಿಕ್ಕಿಹಾಕಿಕೊಂಡಿರುವುದರಿಂದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಬುಧವಾರ ಸ್ಥಗಿತಗೊಳಿಸಲಾಗಿದೆ.

ಪುಲ್ವಾಮದಲ್ಲಿ ಅಡಗಿ ಕುಳಿತಿರುವ 3-4 ಉಗ್ರರು: ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ 3-4 ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಲು ಆರಂಭಿಸಿದೆ ಎಂದು ಶನಿವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಎನ್'ಕೌಂಟರ್, 2 ಉಗ್ರರು, ಓರ್ವ ಸಹಚರ ಸೇರಿ ಮೂವರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರು ಹಾಗೂ ಓರ್ವ ಸಹಚರನನ್ನು ಹತ್ಯೆ ಮಾಡಿದೆ.

ಪುಲ್ವಾಮಾ ದಾಳಿ ಸಾಮಾಗ್ರಿ ಅಮೆಜಾನ್ ನಿಂದ ಖರೀದಿಸಿದ್ದ ಉಗ್ರರು!
40 ಮಂದಿ ಸಿಆರ್'ಪಿಎಫ್ ಯೋಧರನ್ನು ಬಲಿ ಪಡೆದ ಪುಲ್ವಾಮಾ ಉಗ್ರರ ದಾಳಿಗೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಎನ್ ಕೌಂಟರ್: ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಕಣಿವೆ ಪ್ರದೇಶ ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸಪ್ಪಳ ಕೇಳಿಬಂದಿದೆ. ಅದು ಕಳೆದ ವರ್ಷ ಫೆಬ್ರವರಿ 14ರಂದು 40 ಯೋಧರನ್ನು ಬಲಿ ತೆಗೆದುಕೊಂಡಿದ್ದ ಪುಲ್ವಾಮಾ ಜಿಲ್ಲೆಯಲ್ಲಿಯೇ.

ಪುಲ್ವಾಮ ದಾಳಿಯ ವೀರ ಯೋಧರ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ: ಗೃಹ ಸಚಿವ ರಾಜನಾಥ್ ಸಿಂಗ್
ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ತ್ಯಾಗ, ಬಲಿದಾನವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಪುಲ್ವಾಮದಲ್ಲಿ ಶೋಧ ಕಾರ್ಯಾಚರಣೆ ಪುನರಾರಂಭ, ಎರಡನೇ ದಿನ ಓರ್ವ ಉಗ್ರನ ಹತ್ಯೆ
ಕಾಶ್ಮೀರದ ದಕ್ಷಿಣ ಜಿಲ್ಲೆಯಾದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

