Puttur

ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳಿಂದ ಬಾಬ್ರಿ ಮಸೀದಿ ದ್ವಂಸ ಪ್ರಹಸನ ನಾಟಕ ಪ್ರದರ್ಶನ: ವಿವಾದ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಹಸನ ಮತ್ತು ರಾಮಮಂದಿರ ನಿರ್ಮಾಣದ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ವಾರ್ಷಿಕೋತ್ಸವದಲ್ಲಿ ನೀಡಿರುವ ನೃತ್ಯ ಸಂಗೀತ ಆಧಾರಿತ ನಾಟಕ ಪ್ರದರ್ಶನ ವಿವಾದ ಹುಟ್ಟುಹಾಕಿದೆ.

ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ: Dyspಗೆ ಕಡ್ಡಾಯ ರಜೆ, ಮತ್ತಿಬ್ಬರು ಅಮಾನತು!
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರು.

ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ನಾಲ್ವರು ಶಂಕಿತ ಬಜರಂಗದಳ ಕಾರ್ಯಕರ್ತರ ಬಂಧನ
ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಯುವತಿಯ ಜೊತೆಯಲ್ಲಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳದ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರನ್ನು ಬಂಧಿಸಲಾಗಿದೆ.

ಕೇಂದ್ರ ಗೃಹ ಸಚಿವರಿಗೇ ರಕ್ಷಣೆ ಇಲ್ಲ ಎಂದರೆ ರಾಜ್ಯದ ಜನರ ಪರಿಸ್ಥಿತಿಯೇನಿರಬಹುದು?; ಡಿ.ಕೆ.ಶಿವಕುಮಾರ್
ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಿಂದಾಗಿ ಪುತ್ತೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದು ಮಾಡಲಾಗಿದೆ. ಕೇಂದ್ರ ಗೃಹ ಸಚಿವರಿಗೇ ರಕ್ಷಣೆ ಕೊಡಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದರೆ, ರಾಜ್ಯಜ ಜನರ ಪರಿಸ್ಥಿತಿ ಹೇಗಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಶನಿವಾರ ಪ್ರಶ್ನಿಸಿದ್ದಾರೆ.

ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಹೊಸ ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ ಸ್ಥಾಪನೆ: ಅಮಿತ್ ಶಾ
ಮೂರು ವರ್ಷಗಳಲ್ಲಿ ದೇಶದಲ್ಲಿ 2 ಲಕ್ಷ ಹೊಸ ಪ್ರಾಥಮಿಕ ಕೃಷಿ ಕ್ರೆಡಿಟ್ ಸೂಸೈಟಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಪುತ್ತೂರಿನ ಪಂಚಮುಖಿ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು ರಾಜ್ಯಕ್ಕೆ ನಿರಂತರ ಭೇಟಿ ನೀಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರಿಗೆ ಆಗಮಿಸಿದ್ದಾರೆ.

ಹಿಂದೂ ದೇವರಿಗೆ ಅಪಮಾನ ಆರೋಪ: ಕಾಂಗ್ರೆಸ್ ಮುಖಂಡೆ ಶೈಲಜಾ ಅಮರನಾಥ್ ಮನೆ ಮೇಲೆ ದಾಳಿ
ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದಿಂದ ಅಪರಿಚಿತ ದುಷ್ಕರ್ಮಿಗಳು ರಾಜ್ಯ ಕಾಂಗ್ರೆಸ್ ನ ಐಟಿ ಸೆಲ್ ಕಾರ್ಯದರ್ಶಿ ವಿ. ಶೈಲಜಾ ಅಮರನಾಥ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ದಕ್ಷಿಣ ಕನ್ನಡ: ಕೊಳದ ಮೂಲಕ ಜಲ ವಿದ್ಯುತ್ ತಯಾರಿಸುವ ಪುತ್ತೂರಿನ ಪ್ರಗತಿಪರ ಕೃಷಿಕ ಸುರೇಶ್ ಬಲ್ನಾಡ್
ಇವರ ತಂದೆ ಮಗ ಎಂಜಿನಿಯರ್ ಆಗಬೇಕೆಂದು ಬಯಸಿದ್ದರು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮವೊಂದರ 61 ವರ್ಷದ ರೈತ ಅದರಾಚೆಗಿನ ಬದುಕಿನ ಬಗ್ಗೆ ಯೋಚನೆ ಮಾಡಿದರು.

ಪುತ್ತೂರು ಮೂಲದ ಅತ್ಯಾಚಾರ ಅರೋಪಿಯನ್ನು ಒ ಎಲ್ ಎಕ್ಸ್ ಮೂಲಕ ಹಿಡಿದ ಪೊಲೀಸರು
30ರ ಹರೆಯದ ಆರೋಪಿ ಪ್ರವೀಣ್ ದಕ್ಷಿಣ ಕನ್ನಡದ ಪುತ್ತೂರಿನ ನಿವಾಸಿ. 2019ರಲ್ಲಿ ಆತ ಕೇರಳದ ಚೊಟ್ಟನಿಕ್ಕರ ದೇವಾಲಯದಲ್ಲಿ ಕೆಲಸಕ್ಕಿದ್ದ. ಆ ಸಂದರ್ಭದಲ್ಲಿ ಓರ್ವ ಯುವತಿಯೊಂದಿಗೆ ಆತ ಪ್ರೀತಿಯಲ್ಲಿ ಬಿದ್ದಿದ್ದ.

