ದೇಶಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ದಿನಗಳ ಅಮೆರಿಕ ಪ್ರವಾಸ: ಕ್ವಾಡ್ ನಾಯಕರ ಶೃಂಗಸಭೆ, ಯುಎನ್ ಜಿಎಯಲ್ಲಿ ಭಾಗಿ
ಪ್ರಧಾನಿ ನರೇಂದ್ರ ಮೋದಿ ಬುಧವಾರದಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಲ್ಲಿ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದು 76ನೇ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ಉನ್ನತ ಮಟ್ಟದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.