ಮಹಾರಾಷ್ಟ್ರದ 18ನೇ ಮುಖ್ಯಮಂತ್ರಿಯಾಗಿ ಗುರುವಾ ಸಂಜೆ ಪ್ರಮಾಣ ವಚನ ಸ್ವೀಕರಿಸಿದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ ಮುಖವಾಣಿ “ಸಾಮ್ನಾ” ಪತ್ರಿಕೆ ಸಂಪಾದಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.