R. Ashok

ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ: 1 ಬುಟ್ಟಿ ಮಣ್ಣು ಹಾಕಲೂ ಹಣವಿಲ್ಲ ರಸ್ತೆಗುಂಡಿಗೆ; ಮಜವಾದಿ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ಏಕೆ!
ಸ್ವತಃ ನಿಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರೇ ಒಪ್ಪಿಕೊಂಡಿರುವಂತೆ ರಸ್ತೆಗುಂಡಿಗಳಿಗೆ ಒಂದು ಬುಟ್ಟಿ ಮಣ್ಣು ಹಾಕಲೂ ತಮ್ಮ ಸರ್ಕಾರದ ಬಳಿ ದುಡ್ಡಿಲ್ಲ.

ನಾಗಮಂಗಲ ಗಲಭೆ: ವಿಪಕ್ಷ ನಾಯಕರ ಮೇಲೆ FIR, ಹೇಡಿತನದ ಪರಮಾವಧಿ- ಆರ್ ಅಶೋಕ್ ಕಿಡಿ
"ಕೈಲಾಗದವನು ಮೈಪರಚಿಕೊಂಡ" ಎಂಬಂತೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುದಳ್ಳುರಿಗೆ ಕಾರಣರಾದ ಮತಾಂಧರನ್ನು ಪತ್ತೆ ಹಚ್ಚಿ ಅವರ ಹೆಡೆಮುರಿ ಕಟ್ಟಬೇಕಾದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಪಕ್ಷ ನಾಯಕರ ಮೇಲೆ FIR ಹಾಕಿರುವುದು ಹೇಡಿತನದ ಪರಮಾವಧಿ ಎಂದು ಟೀಕಿಸಿದ್ದಾರೆ.

ಅದ್ಧೂರಿ ದಸರಾ ಆಚರಣೆ ಕಾಂಗ್ರೆಸ್ ಸರ್ಕಾರದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ: ಆರ್.ಅಶೋಕ್
ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು.

ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚಿಸಿ: ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ.

ಪಾದಯಾತ್ರೆಗೆ 7ನೇ ದಿನ: ಮೈಸೂರು ತಲುಪಿದ ದೋಸ್ತಿ ನಾಯಕರು, ನಾಳೆ ಸಮಾರೋಪ ಕಾರ್ಯಕ್ರಮ
ಪಾದಯಾತ್ರೆ ಮೈಸೂರು ಹೊರವಲಯ ತಲುಪುತ್ತಿದ್ದಂತೆ ಜನ ದಟ್ಟಣೆ ಉಲ್ಲೇಖಿಸಿ ಪೊಲೀಸರು ಸ್ವಲ್ಪ ಕಾಲ ತಡೆದರು. ಪೊಲೀಸರ ನಡೆ ವಿರುದ್ಧ ದೋಸ್ತಿ ನಾಯಕರ ಆಕ್ರೋಶ. ನಾಳೆ ಮೆಗಾ ರ್‍ಯಾಲಿಯೊಂದಿಗೆ ನಾಳೆ ದೋಸ್ತಿ ಯಾತ್ರೆ ಮುಕ್ತಾಯವಾಗಲಿದೆ.

ರಾಜ್ಯದಲ್ಲಿ ಡೆಂಘಿ ತುರ್ತು ಪರಿಸ್ಥಿತಿ ಘೋಷಿಸಿ, ಉಚಿತವಾಗಿ ಪರೀಕ್ಷೆ ಮಾಡಿಸಿ- ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹ
ರಾಜ್ಯದಲ್ಲಿ ಕೂಡಲೇ ಡೆಂಘಿ ತುರ್ತು ಪರಿಸ್ಥಿತಿ ಘೋಷಿಸಿ, ಜನರಿಗೆ ಉಚಿತವಾಗಿ ಸರ್ಕಾರದಿಂದಲೇ ಪರೀಕ್ಷೆ ಮಾಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ನಿಂದ ಜನಾಂಗೀಯ ನಿಂದನೆ: ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ
ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂತಿಯ ತೋಟವನ್ನು ಕದಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನಕಪುರ, ರಾಮನಗರದಲ್ಲಿ ಕಾಡಾನೆ ದಾಳಿ: ರೈತರಿಗೆ ಸೂಕ್ತ ಪರಿಹಾರಕ್ಕೆ ಆರ್ ಅಶೋಕ್ ಆಗ್ರಹ
ಕನಕಪುರ, ರಾಮನಗರದಲ್ಲಿ ಕಾಡಾನೆ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಬೆಳೆ ಹಾನಿಯಾಗಿ ನಷ್ಟ ಅನುಭವಿಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಜನರಿಗೆ ಗುಳೆ ಗ್ಯಾರಂಟಿ ಕೊಟ್ಟಿದೆ: ಆರ್. ಅಶೋಕ್ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು
ರಾಜ್ಯ ಸರ್ಕಾರ ಜನರಿಗೆ ಗುಳೆ ಗ್ಯಾರಂಟಿ ಕೊಟ್ಟಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆ ವಿರುದ್ಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

