ರಾಜಕೀಯಕಲಬುರಗಿ ಲೋಕಸಭಾ ಕ್ಷೇತ್ರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ದೊಡ್ಮನಿ ಸ್ಪರ್ಧೆ?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಹೊಂದಿಲ್ಲ ಎಂದು ತಿಳಿಸಿರುವ ಹಿನ್ನೆಲೆಯಲ್ಲಿ ಅವರ ಅಳಿಯ ರಾಧಾಕೃಷ್ಣ ದೊಡ್ಮನಿ ಅವರನ್ನು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಲ್ಲಿ ವೇದಿಕೆ ಸಜ್ಜಾಗಿದೆ.