Rahul Gandhi ನವ ದೆಹಲಿ

ಪ್ರಣಬ್ ಮುಖರ್ಜಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸದ ಸೋನಿಯಾ, ರಾಹುಲ್
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಸ್ವೀಕಾರ ಕಾರ್ಯಕ್ರಮದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಪಾಲ್ಗೊಂಡಿರಲಿಲ್ಲ.

ಲೋಕಸಭೆ: ಶಾ, ಇರಾನಿ, ಸೋನಿಯಾಗೆ ಮೊದಲ ಸಾಲಿನಲ್ಲಿ ಆಸನ: ರಾಹುಲ್ ಗೆ 2 ನೇ ಸಾಲಿನ ಹಳೆಯ ಸೀಟು
ಲೋಕಸಭೆಯಲ್ಲಿ ಇದೇ ಮೊದಲ ಬಾರಿಗೆ ಗೆದ್ದಿರುವ ಅಮಿತ್ ಶಾ, ರವಿಶಂಕರ್ ಪ್ರಸಾದ್ ಹಾಗೂ ಸ್ಮೃತಿ ಇರಾನಿ ಅವರಿಗೆ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಜೊತೆಗೆ ಮೊದಲ ಸಾಲಿನಲ್ಲಿ ಕೂರುವ ಆಸನದ ವ್ಯವಸ್ಥೆ ಮಾಡಲಾಗಿದೆ.

ಟ್ರಂಪ್ ಜೊತೆಗೆ ಮಧ್ಯಸ್ಥಿಕೆ ಸಭೆ: ಪ್ರಧಾನಿ ರಾಷ್ಟ್ರಕ್ಕೆ ತಿಳಿಸಬೇಕು- ರಾಹುಲ್ ಗಾಂಧಿ
ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸುವಂತೆ ಮೋದಿ ತಮ್ಮನ್ನು ಕೇಳಿದ್ದರು ಎಂಬುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಒಂದು ವೇಳೆ ಇದು ಸತ್ಯವಾದಲ್ಲಿ ಮೋದಿ ದೇಶದ ಹಿತಾಸಕ್ತಿ ಹಾಗೂ 1972ರ ಶಿಮ್ಲಾ ಒಪ್ಪಂದಕ್ಕೆ ದ್ರೋಹ ಬಗೆದಂತಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸೋನಿಯಾ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಸಭೆ: ಸಂಸತ್ತಿನಲ್ಲಿ ಕಾರ್ಯತಂತ್ರ ಕುರಿತಂತೆ ಚರ್ಚೆ
ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಗ್ಗೆ ನಡೆದ ಸಭೆಯಲ್ಲಿ ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷ ಅನುಸರಿಸಬೇಕಾದ ಕಾರ್ಯತಂತ್ರ ಕುರಿತಂತೆ ಚರ್ಚೆ ನಡೆಸಲಾಯಿತು.

ಲೋಕಸಭಾ ಚುನಾವಣೆ: ರಾಹುಲ್ ಗಾಂಧಿ ಸಮ್ಮುಖದಲ್ಲಿ ಕೀರ್ತಿ ಅಜಾದ್ ಕಾಂಗ್ರೆಸ್ ಸೇರ್ಪಡೆ
ಬಿಜೆಪಿ ಉಚ್ಚಾಟಿತ ಲೋಕಸಭಾ ಸದಸ್ಯ ಕೀರ್ತಿ ಅಜಾದ್ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

