Raichur

ರಾಯಚೂರು: ಅಂತ್ಯಕ್ರಿಯೆ ಮುಗಿಸಿ ಬರುವಾಗ ಭೀಕರ ಅಪಘಾತ. 3 ಸಾವು
ಲಾರಿ-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಬಳಿ ನಡೆದಿದೆ.

ರಾಯಚೂರು: ಬಟ್ಟೆ ಒಗೆಯುವಾಗ ಹೊಂಡದಲ್ಲಿ ಮುಳುಗಿ ಮೂವರು ಸಾವು
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಕೋಥಾ ಗ್ರಾಮದಲ್ಲಿ ಇಬ್ಬರು ಮಕ್ಕಳು ಮತ್ತು ತಾಯಿ ಸೇರಿದಂತೆ ಕುಟುಂಬದ ಮೂವರು ಸಣ್ಣ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು
ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರುಪಾಲು ಆಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ.

ರಾಯಚೂರು: ವಿದ್ಯುತ್ ಸ್ಪರ್ಶಿಸಿ ತಂದೆ, ಮಗ ದುರ್ಮರಣ
ರಾಯಚೂರು ತಾಲ್ಲೂಕಿನ ದಿನ್ನಿ ಗ್ರಾಮದಲ್ಲಿ ಶುಕ್ರವಾರ ಭಾರಿ ಮಳೆ ನಂತರ ತಮ್ಮ ಮನೆಯ ವಿದ್ಯುತ್ ತಂತಿಯನ್ನು ಬದಲಿಸುವಾಗ ತಂದೆ ಮತ್ತು ಮಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತರನ್ನು ಮಹೇಶ್ (47) ಮತ್ತು ನವೀನ್ (16) ಎಂದು ಗುರುತಿಸಲಾಗಿದೆ.

ಕೋವಿಡ್‌ನಿಂದ ಪುತ್ರ ಮೃತಪಟ್ಟ ವಿಷಯ ತಿಳಿದು ಸಾವನ್ನಪ್ಪಿದ ತಾಯಿ
ಪುತ್ರ ಕೋವಿಡ್ ಸೋಂಕಿನಿಂದ ಮೃತಪಟ್ಟಿರುವುದು ತಿಳಿಯುತ್ತಿದ್ದಂತೆ ಅವರ ತಾಯಿಯೂ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು, ಬೆಂಗಳೂರು, ಧಾರವಾಡ ಕೃಷಿ ವಿವಿ ಆಡಳಿತ ಮಂಡಳಿಗೆ ಪ್ರಗತಿಪರ ರೈತರ ನೇಮಕ
ರಾಯಚೂರು, ಧಾರವಾಡ ಮತ್ತು ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಪ್ರಗತಿಪರರೈತರನ್ನು ನೇಮಿಸಲಾಗಿದೆ. ರಾಜ್ಯಪಾಲರು ಹಾಗೂ ಸಂಬಂಧಪಟ್ಟ ವಿಶ್ವವಿದ್ಯಾಲಯದ ಉಪಕುಲಪತಿಗಳ ಆದೇಶದನ್ವಯಈ ನೇಮಕಾತಿಯಾಗಿದೆ.

ಪ್ರೇಮ ವಿವಾಹಕ್ಕೆ ವಿರೋಧ: ಯುವಕನ ಕುಟುಂಬದ ನಾಲ್ವರ ಬರ್ಬರ ಹತ್ಯೆ
ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿ ಯುವತಿ ಕುಟುಂಬಸ್ಥರು ಯುವಕನ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಕಾರು ಪಲ್ಟಿ; ಒಂದೇ ಕುಟುಂಬದ ಇಬ್ಬರು ಸಾವು
ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಪಲ್ಟಿಯಾಗಿ ಅದರಲ್ಲಿದ್ದ ಒಂದೇ ಕುಟುಂಬದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮಣ್ಣಿಕೇರಿ ಬಳಿ ನಡೆದಿದೆ

ರಾಯಚೂರು; ಆಸ್ತಿ ಹಂಚಿಕೆ ವಿವಾದ, ಸಹೋದರಳಿಯರಿಂದ ಮಾವನ ಕೊಲೆ
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಮ್ಮ ಮಾವನನ್ನೇ ಇಬ್ಬರು ಸೋದರಳಿಯಂದಿರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

