raid

ಜಮ್ಮು ಮತ್ತು ಕಾಶ್ಮೀರ: ನಿಷೇಧಿತ ಜಮಾತ್-ಎ-ಇಸ್ಲಾಮಿ ವಿರುದ್ಧ ಬೃಹತ್ ಕಾರ್ಯಾಚರಣೆ; ಕುಲ್ಗಾಮ್‌ನ 200 ಸ್ಥಳಗಳಲ್ಲಿ ದಾಳಿ!
ಕಳೆದ ನಾಲ್ಕು ದಿನಗಳಲ್ಲಿ, 500ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಮತ್ತು ಅವರಲ್ಲಿ ಹಲವರನ್ನು ಬಂಧಿಸಲಾಗಿದೆ.

KGF ಬಾಬುಗೆ ಆರ್‌ಟಿಓ ಶಾಕ್: ಬಿಗ್ ಬಿ, ಆಮೀರ್ ಖಾನ್‌ರಿಂದ ಖರೀದಿಸಿದ್ದ ಐಷಾರಾಮಿ ಕಾರು ಜಪ್ತಿ!
ಕೆಜಿಎಫ್ ಬಾಬುಗೆ ಸೆಲೆಬ್ರಿಟಿಗಳು ಬಳಕೆ ಮಾಡಿದ ಕಾರುಗಳನ್ನು ಖರೀದಿ ಮಾಡುವ ಕ್ರೇಜ್ ಇದೆ. ಅದರಲ್ಲೂ ಬಾಲಿವುಡ್ ಸೆಲೆಬ್ರಿಟಿಗಳ ಕಾರು ಎಂದರೆ ಅವರು ಖರೀದಿಸಿ ತರುತ್ತಾರೆ.

ಕಳಪೆ ಗುಣಮಟ್ಟದ ಉತ್ಪನ್ನಗಳ ಮಾರಾಟ: FirstCry ಗೋದಾಮು ಮೇಲೆ BIS ದಾಳಿ
ದಾಳಿಯ ಸಮಯದಲ್ಲಿ, ಹಲವಾರು ಉತ್ಪನ್ನ ಮಾದರಿಗಳನ್ನು ಮಾನ್ಯ ಬಿಐಎಸ್ ಪರವಾನಗಿಗಳಿಲ್ಲದೆ ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಬಿಐಎಸ್ ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಫ್ಲ್ಯಾಟ್ ತಪಾಸಣೆ; ಅಪಾರ ಪ್ರಮಾಣದ ನಗದು, ಚಿನ್ನ ವಶ!
ದುಬೈನಿಂದ ಸೋಮವಾರ ರಾತ್ರಿ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ತಪಾಸಣೆ ಮಾಡಿದಾಗ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ಬಳಿಕ ನಟಿಯನ್ನು ಬಂಧಿಸಲಾಗಿತ್ತು.

ವೆಲ್ಲೂರು: ಡಿಎಂಕೆ ಸಚಿವ ದುರೈಮುರುಗನ್ ನಿವಾಸ ಸೇರಿ ಹಲವು ಸ್ಥಳಗಳ ಮೇಲೆ ED ದಾಳಿ
ಇಂದು ಮುಂಜಾನೆ ಆರಂಭವಾದ ದಾಳಿ ತನಿಖೆಯ ಭಾಗವಾಗಿದೆ. ತಪಾಸಣೆ ವೇಳೆ ಸಚಿವ ದುರೈಮುರುಗನ್ ಮತ್ತು ಸಂಸದ ಕತೀರ್ ಆನಂದ್ ಇಬ್ಬರೂ ವೆಲ್ಲೂರಿನಲ್ಲಿ ಇರಲಿಲ್ಲ ಎಂದು ಮೂಲಗಳು ಖಚಿತಪಡಿಸಿವೆ. ಕಾರ್ಯಾಚರಣೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಭ್ರಷ್ಟ ಅಧಿಕಾರಿಗಳ ಬೇಟೆಯಾಡಿದ ಲೋಕಾಯುಕ್ತ ಪೊಲೀಸರು: ಶೋಧ ವೇಳೆ ಸಿಕ್ಕಿದ್ದು 26 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಪಾಸ್ತಿ
ಈ ಪೈಕಿ, ಮಂಗಳೂರಿನ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಎಂಸಿ ಅವರ ಬಳಿ 11.93 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರಿಗೆ ಪತ್ತೆಯಾಗಿದೆ. ಇದರಲ್ಲಿ 10.41 ಕೋಟಿ ಮೌಲ್ಯದ ಮೂರು ನಿವೇಶನಗಳಾಗಿವೆ.

Lokayukta raid: ಹಲವು ಆರ್ ಟಿಒ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ; ಶೋಧ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್‌ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್‌ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ
ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಇದರಂತೆ ಮಂಗಳವಾರ ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳು, ಪೊಲೀಸರು 62 ಅಬಕಾರಿ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು.

ಮಂಗಳೂರು ನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ 13 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ
ಆನಂದ್ ಅವರಲ್ಲದೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ನಗರ ಪಾಲಿಕೆ ಆಯುಕ್ತರು ಮತ್ತು ಕೆಎಎಸ್ ಅಧಿಕಾರಿ ಕೆ.ನರಸಿಂಹಮೂರ್ತಿ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

