raid

ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸದಲ್ಲಿ ಕಂತೆ ಕಂತೆ ಹಣ: ಲೋಕಾಯುಕ್ತ ಅಧಿಕಾರಿಗಳು ದಂಗು!
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಂತೆ ಕಂತೆ ನೋಟುಗಳನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ದಂಗಾದರು.

ಬಿಜೆಪಿ ಎಂಎಲ್ಸಿ ಆರ್.ಶಂಕರ್ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ: 50 ಸಾವಿರ ಸೀರೆ, 20 ಸಾವಿರ ಶಾಲಾ ಬ್ಯಾಗ್'ಗಳು ವಶಕ್ಕೆ
ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿರುವ ಬಿಜೆಪಿ ಎಂಎಲ್ಸಿ ಆರ್.ಶಂಕರ್ ಅವರ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, 50 ಸಾವಿರಕ್ಕೂ ಹೆಚ್ಚು ಸೀರೆಗಳು, 20 ಸಾವಿರ ಶಾಲಾ ಬ್ಯಾಗ್‌ಗಳು ಮತ್ತು ಸಾವಿರಾರು ಸ್ಟೀಲ್ ಪ್ಲೇಟ್‌ಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಎಂಎಲ್‍ಸಿ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ: ಸಾರ್ವಜನಿಕರಿಗೆ ಹಂಚಲು ತಂದಿದ್ದ ಸೀರೆ, ಸ್ಕೂಲ್ ಬ್ಯಾಗ್ ಜಪ್ತಿ
ಬೀರೇಶ್ವರ ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

ರೂ.42.63 ಕೋಟಿ ತೆರಿಗೆ ಬಾಕಿ: ಮಂತ್ರಿ ಮಾಲ್ ಆಸ್ತಿ ಜಪ್ತಿಗೆ ಕೋರ್ಟ್ ತಡೆಯಾಜ್ಞೆ, ವಶಕ್ಕೆ ಪಡೆದಿದ್ದ ಚರಾಸ್ತಿ ವಾಪಸ್ ನೀಡಿದ ಬಿಬಿಎಂಪಿ
ಆಸ್ತಿ ತೆರಿಗೆ ಪಾವತಿಸದ ಮಂತ್ರಿ ಮಾಲ್'ಗೆ ಶಾಕ್ ನೀಡಲು ಮುಂದಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಂದಾಯ ವಿಭಾಗದ ಅಧಿಕಾರಿಗಳು, ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.

ಎಸ್‌ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಲು ಕೇಂದ್ರ ನಿರ್ದೇಶನ ನೀಡಿದೆಯೇ?: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಕಚೇರಿಗಳ ಮೇಲೆ ದಾಳಿ ನಡೆಸಲು ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತಿದೆಯೇ ಎಂಬುದರ ಕುರಿತು ಕರ್ನಾಟಕ ಹೈಕೋರ್ಟ್ ಬುಧವಾರ ಸ್ಪಷ್ಟನೆ ಕೇಳಿದೆ. ಈ ಸಂಬಂಧ ದಾಖಲೆಗಳನ್ನು ಸಲ್ಲಿಸುವಂತೆಯೂ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ.

ಪಾಕಿಸ್ತಾನದ ಸಂಪರ್ಕ ಹೊಂದಿದ್ದ ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ಎನ್ಐಎ ದಾಳಿ
ಪಾಕಿಸ್ತಾನದ ಪ್ರದೇಶದಿಂದ ಡ್ರೋನ್‌ಗಳ ಮೂಲಕ ಗಡಿಯಾಚೆಗಿನ ಮಾದಕವಸ್ತು ಪೂರೈಕೆಗೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಮತ್ತು ಇತರರ ಸಹಾಯಕರೊಂದಿಗೆ ಸಂಪರ್ಕ ಹೊಂದಿದ್ದ ಹರಿಯಾಣ, ಪಂಜಾಬ್ ಮತ್ತು ರಾಜಸ್ಥಾನದ ಹತ್ತು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸುತ್ತಿದೆ.

ಕಬ್ಬಿನ ತೂಕದಲ್ಲಿ ವಂಚನೆ: 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ
ರೈತರು ಪೂರೈಸುವ ಕಬ್ಬಿನ ತೂಕವನ್ನು ಕಡಿತಗೊಳಿಸಿ ಕಾರ್ಖಾನೆಗಳು ಕಬ್ಬು ಬೆಳೆಗಾರರನ್ನು ವಂಚಿಸುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿನ್ನೆ ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ್ದಾರೆ.

ವಡೋದರಾ ಬಳಿ ಕಾರ್ಖಾನೆ ಮೇಲೆ ಗುಜರಾತ್ ಎಟಿಎಸ್ ದಾಳಿ; 500 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ವಡೋದರಾ ನಗರದ ಹೊರವಲಯದಲ್ಲಿರುವ ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿದ್ದು, ಸುಮಾರು 500 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಎಂಡಿ ಡ್ರಗ್‌ನ ಬೃಹತ್ ಸಂಗ್ರಹವನ್ನು ವಶಪಡಿಸಿಕೊಂಡಿದೆ.

ದರೋಡೆಕೋರರು-ಭಯೋತ್ಪಾದಕರ ನಂಟು: ದೇಶದ ವಿವಿಧೆಡೆ ಎನ್ಐಎ ದಾಳಿ, ಶೋಧನೆ
ದರೋಡೆಕೋರ-ಭಯೋತ್ಪಾದಕರ ಜಾಲ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬೆಳಿಗ್ಗೆ ದೇಶದ ವಿವಿಧೆಡೆ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದೆ.

