ದೇಶತಮಿಳುನಾಡಿನಲ್ಲಿ ಭಾರೀ ಮಳೆ: 7,500 ಜನರ ಸ್ಥಳಾಂತರ, ರೈಲು ಹಳಿಗಳು ಜಲಾವೃತ! ವಿಡಿಯೋ
ತಮಿಳುನಾಡಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ದಕ್ಷಿಣ ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ರಾಜ್ಯದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಾಸಿ ಜಿಲ್ಲೆಗಳಲ್ಲಿ ಭತ್ತದ ಗದ್ದೆಗಳು, ರಸ್ತೆಗಳು ಮತ್ತು ಸೇತುವೆಗಳು ನೀರಿನಲ್ಲಿ ಜಲಾವೃತವಾಗಿವೆ. ಅನೇಕ ವಸತಿ ಪ್ರದೇಶಗಳಿಗೂ ನೀರು ನುಗ್ಗಿದ್ದು, ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ.