rain

ಬೆಂಗಳೂರಿನಲ್ಲಿ ವರುಣ ಆರ್ಭಟ: 17.3 ಮಿ.ಮೀ. ಮಳೆಗೆ ಬೆಂಗಳೂರು ತತ್ತರ; ಹಲವೆಡೆ ಜಲಾವೃತ, ಮರಗಳು ಧರೆಗೆ..!
ಸೋಮವಾರ ಬೆಂಗಳೂರಿನ ಜಿಕೆವಿಕೆ 52.5 ಮಿ.ಮೀ. ಮಳೆ ದಾಖಲಿಸಿದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 5.3 ಮಿ.ಮೀ. ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3.8 ಮಿ.ಮೀ. ಮಳೆ ದಾಖಲಾಗಿದೆ.

ರಾಜ್ಯದಲ್ಲಿ ಮಳೆ ಮತ್ತೆ ಚುರುಕು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಸಾಧ್ಯತೆ..!
ಕರಾವಳಿ ಕರ್ನಾಟಕದಲ್ಲಿ ಮಂಗಳವಾರ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬುಧವಾರದಿಂದ ಶನಿವಾರದವರೆಗೆ ಕೆಲವೆಡೆ ಮಳೆಯಾಗಬಹುದು.

ರಾಜ್ಯದ ಹಲವೆಡೆ ವರುಣನ ಆರ್ಭಟ: ಬೆಂಗಳೂರು ಸೇರಿ ಪ್ರಮುಖ ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ!
ಬಂಗಾಳ ಕೊಲ್ಲಿಯ ಪೂರ್ವ ಮಧ್ಯ ಹಾಗೂ ಪಶ್ಚಿಮ ಮಧ್ಯ ಭಾಗದಲ್ಲಿ ಉಂಟಾಗಿರುವ ಗುರುತಿಸಲ್ಪಟ್ಟ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ಉಕ್ಕಿ ಹರಿಯುತ್ತಿರುವ ದರ್ಪಣ ತೀರ್ಥ ನದಿ, ಸೇತುವೆ ಮುಳುಗಡೆ..!
ಒಂದೂವರೆ ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಯಿಂದ ದರ್ಪಣ ತೀರ್ಥ ನದಿ ಉಕ್ಕಿ ಹರಿದು, ಆದಿ ಸುಬ್ರಹ್ಮಣ್ಯ ದೇವಸ್ಥಾನದ ಆವರಣಕ್ಕೆ ನೀರು ನುಗ್ಗಿತು.

ಭಾರಿ ಮಳೆ: ದೆಹಲಿಗೆ ತೆರಳುತ್ತಿದ್ದ 15 ವಿಮಾನಗಳ ಮಾರ್ಗ ಬದಲಾವಣೆ; ನಗರದ ಹಲವು ಭಾಗ ಜಲಾವೃತ
ತೀವ್ರ ಗುಡುಗು ಸಹಿತ ಮಳೆ, ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ರಾಷ್ಟ್ರ ರಾಜಧಾನಿಯಾದ್ಯಂತ ವೈಮಾನಿಕ ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.

ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ KRS ಜಲಾಶಯ ನೀರಿನ ಮಟ್ಟ
ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.

ಶಿವಮೊಗ್ಗ: ಮೈದುಂಬಿ ಹರಿಯುತ್ತಿರುವ ತುಂಗಾ-ಭದ್ರಾ; ಜಲಾಶಯಗಳಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!
ಮಳೆಯಿಂದ ತುಂಗಾ ನದಿಯೂ ತುಂಬಿ ಹರಿಯುತ್ತಿದ್ದು, ಅಣೆಕಟ್ಟಿನಿಂದ 89,503 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರಬೇಕು.

KRS, ಕಬಿನಿಗೆ ಒಳಹರಿವು ಹೆಚ್ಚಳ: ರಾಜ್ಯ ಸರ್ಕಾರಕ್ಕೆ ವರದಾನವಾದ ವರುಣ; ಕಾವೇರಿ ವಿವಾದದಿಂದ ತಾತ್ಕಾಲಿಕ ಮುಕ್ತಿ..!
ಜುಲೈ 28ರಂದು ಸಿಡಬ್ಲ್ಯುಆರ್‌ಸಿ, ಬಿಳಿಗುಂಡ್ಲು ಗಡಿ ಮಾಪನ ಕೇಂದ್ರದಲ್ಲಿ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಯುವಂತೆ ನೋಡಿಕೊಳ್ಳುವಂತೆ ಕರ್ನಾಟಕಕ್ಕೆ ಸೂಚಿಸಿತ್ತು. ಇದರಿಂದ ಒಟ್ಟು ಸುಮಾರು 4 ಟಿಎಂಸಿ ಅಡಿ ನೀರನ್ನು ಹರಿಸಬೇಕಾದ ಪರಿಸ್ಥಿತಿ ಎದುರಾಗಿತ್ತು.

ಮಳೆ ಕೊರತೆ: ವಲಸೆ ತಡೆಯಲು ಸರ್ಕಾರ ಮಾಸ್ಟರ್ ಪ್ಲ್ಯಾನ್; VB-G RAM G ಉದ್ಯೋಗ ನೀಡಲು ಮುಂದು!
ದುರ್ಬಲ ಮುಂಗಾರು ಪರಿಸ್ಥಿತಿಯಿಂದ ಗ್ರಾಮೀಣ ಜನರ ಜೀವನೋಪಾಯಕ್ಕೆ ಧಕ್ಕೆಯಾಗದಂತೆ ಹಾಗೂ ವಲಸೆ ತಡೆಯುವ ಉದ್ದೇಶದಿಂದ ಪ್ರತಿ ತಿಂಗಳು 1.25 ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಸುವ ಗುರಿಯನ್ನು ರಾಜ್ಯ ಸರ್ಕಾರ ನಿಗದಿಪಡಿಸಿದೆ.

