rain

ತಮಿಳುನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ: ಚೆನ್ನೈ ಸೇರಿ 12 ಜಿಲ್ಲೆಗಳಲ್ಲಿ ಶಾಲೆಗಳು ಬಂದ್!
ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆಯಾದ ನಂತರ ಶಾಲೆಗಳನ್ನು ಮುಚ್ಚಿ ಆದೇಶ ಹೊರಡಿಸಲಾಗಿದೆ.

Fengal Cyclone: ಬೆಂಗಳೂರು, ಸುತ್ತಮುತ್ತ ಇನ್ನೂ ಒಂದು ದಿನ ಮೋಡ ಕವಿದ ವಾತಾವರಣ, ಮಳೆ- ಹವಾಮಾನ ವರದಿ
ಕರಾವಳಿ ಕರ್ನಾಟಕ ಮತ್ತು ಪಕ್ಕದ ಪೂರ್ವ-ಮಧ್ಯ ಅರಬ್ಬಿ ಸಮುದ್ರದ ಮೇಲೆ ಮಂಗಳವಾರ ಬೆಳಿಗ್ಗೆ 8.30 ರ ಸುಮಾರಿಗೆ ಕಡಿಮೆ ಒತ್ತಡದ ಪ್ರದೇಶ ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿಕೆಯಲ್ಲಿ ತಿಳಿಸಿದೆ.

ನಗರದಲ್ಲಿ ಮಳೆ ಅವಾಂತರ ತಡೆಯಲು ಪಾಲಿಕೆ ಸಿದ್ಧತೆ: ತಗ್ಗು ಪ್ರದೇಶಗಳಲ್ಲಿ 80 ಅರ್ಥ್‌ಮೂವರ್‌ಗಳ ನಿಯೋಜನೆಗೆ ಸೂಚನೆ
ವಲಯ ಆಯುಕ್ತರೊಂದಿಗೆ ಸೋಮವಾರ ಸಭೆ ನಡೆಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

Fengal Cyclone: ಮಳೆ ಇದ್ದರೂ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದ ಜಿಲ್ಲಾಡಳಿತ; ಪೋಷಕರು ಬೇಸರ
ಕೆಲವು ವರ್ಗದ ಪೋಷಕರು ಮಾತ್ರ ರಜೆಗೆ ಒತ್ತಾಯಿಸುತ್ತಿದ್ದಾರೆ. ಮಳೆ ನಿಯಂತ್ರಣ ತಪ್ಪಿದರೆ ಸರ್ಕಾರವೇ ರಜೆ ಘೋಷಿಸುತ್ತದೆ. ಆದರೆ. ಕೆಲವು ಪೋಷಕರು ತುಂತುರು ಮಳೆಯಾದರೂ ಚಿಂತಿತರಾಗಿ, ರಜೆಗೆ ಒತ್ತಾಯಿಸುತ್ತಿದ್ದಾರೆ.

ತಮಿಳು ನಾಡಿನ ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ: 1,200 ನಿವಾಸಿಗಳ ಸ್ಥಳಾಂತರ
ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಜನರನ್ನು ಸ್ಥಳಾಂತರ ಮಾಡಲಾಗಿದ್ದರೆ, ತಗ್ಗು ಮತ್ತು ದುರ್ಬಲ ಪ್ರದೇಶಗಳಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಇತರರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

'ಫೆಂಗಲ್' ಚಂಡಮಾರುತ: ತಮಿಳು ನಾಡಿನಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ
ಶ್ರೀಲಂಕಾದ ಟ್ರಿಂಕೋಮಲಿಯ ಆಗ್ನೇಯಕ್ಕೆ 310 ಕಿಮೀ, ಪುದುಚೇರಿಯ ದಕ್ಷಿಣ ಆಗ್ನೇಯಕ್ಕೆ 710 ಕಿಮೀ ಮತ್ತು ಚೆನ್ನೈನಿಂದ 800 ಕಿಮೀ ಆಗ್ನೇಯಕ್ಕೆ ಇದೆ ಎಂದು ಭಾರತ ಹವಾಮಾನ ಇಲಾಖೆ (IMD) ಹೇಳಿದೆ.

Cyclone: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಸಾಧ್ಯತೆ
ತಮಿಳುನಾಡಿನ ಮೈಲಾಡುತುರೈ, ನಾಗಪಟ್ಟಣಂ, ತಿರುವಾರುರ್ ಮತ್ತು ಕರೈಕಲ್ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಪ್ರಾದೇಶಿಕ ಹವಾಮಾನ ಕೇಂದ್ರ ರೆಡ್ ಅಲರ್ಟ್ ನೀಡಿದೆ.

ಮಳೆ ಅವಾಂತರ ಬಳಿಕ ಎಚ್ಚೆತ್ತ ಸರ್ಕಾರ: ಅಕ್ರಮ ಕಟ್ಟಡ ತಡೆಗೆ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ನೀಡಲು ಮುಂದು!
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಉಂಟಾಗಿರುವ ಅತಿವೃಷ್ಟಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸಭೆ ನಡೆಸಿದರು.

ಮಳೆ ನಿಂತರೂ ನಿಲ್ಲದ ಸಂಕಷ್ಟ: ಸಾಂಕ್ರಾಮಿಕ ರೋಗ ಕುರಿತು ಜನರಲ್ಲಿ ಹೆಚ್ಚಿದ ಆತಂಕ
ಜಕ್ಕೂರು, ಡಾ.ಶಿವರಾಮಕಾರಂತ್ ಲೇಔಟ್ 2ನೇ ಹಂತದಲ್ಲಿ ನೀರು ಇಳಿಮುಖವಾಗುತ್ತಿದ್ದಂತೆ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಖಾಲಿ ನಿವೇಶನಗಳು ಹಾಗೂ ಚರಂಡಿಗಳಲ್ಲಿ ನೀರು ನಿಂತು ದುರ್ವಾಸನೆ ಬೀರುತ್ತಿದ್ದು, ಸೊಳ್ಳೆಗಳು ಹೆಚ್ಚಾಗಿವೆ.

