rain

ರಾಜ್ಯದಲ್ಲಿ ಮುಂಗಾರು ಅಬ್ಬರ: ಒಂದೇ ದಿನ ಮೂರು ಜಿಲ್ಲೆಗಳಲ್ಲಿ ಭಾರೀ ಅವಾಂತರ, ಜನಜೀವನ ಅಸ್ತವ್ಯಸ್ತ
ಘಟನೆ ನಡೆದ ವೇಳೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (MSRTC) ಬಸ್ ಹಾಗೂ ಹಲವು ಕಾರುಗಳು ಆ ಮಾರ್ಗದಲ್ಲಿ ಸಂಚರಿಸುತ್ತಿದ್ದವು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ರಾಜ್ಯದ ಹಲವೆಡೆ ಮುಂಗಾರು ಆರ್ಭಟ: KRS- ಹೇಮಾವತಿ ಜಲಾಶಯದ ನೀರಿನ ಮಟ್ಟ ಹೆಚ್ಚಳ; ರೈತರ ಮೊಗದಲ್ಲಿ ಮಂದಹಾಸ!
ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ಒಳಹರಿವಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ ಸದ್ಯ 18.782 ಟಿಎಂಸಿ ನೀರು ಸಂಗ್ರಹವಾಗಿದೆ.

ಶಿವಮೊಗ್ಗದಲ್ಲಿ ಭಾರಿ ಮಳೆ: ಭೋರ್ಗರೆದು ಹರಿಯುತ್ತಿರುವ ನದಿಗಳು; ಮೂರು ಜಲಾಶಯ ಭರ್ತಿ!
ನಿರಂತರ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಪ್ರಮುಖ ಜಲಾಶಯಗಳು ಮತ್ತು ಜಲಮೂಲಗಳಲ್ಲಿ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿನ ಶಾಲೆಗಳು ಮತ್ತು ಕಾಲೇಜುಗಳಿಗೆ ಮಂಗಳವಾರ ಶಿಕ್ಷಣ ಇಲಾಖೆ ರಜೆ ಘೋಷಿಸಿತ್ತು.

ಕೇರಳ: ವಯನಾಡ್ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾರಿ ಭೂಕುಸಿತ; ಹಲವರು ಸಿಲುಕಿರುವ ಶಂಕೆ; Video
ಭೂಕುಸಿತದಲ್ಲಿ ನಿರ್ಮಾಣ ಹಂತದಲ್ಲಿರುವ ಕೋಯಿಕ್ಕೋಡ್-ವಯನಾಡ್ ಅವಳಿ ಸುರಂಗ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ: ಅಪಾಯದ ಮಟ್ಟದಲ್ಲಿ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ; ಗಡಿ ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ!
ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ್ ಬಳಿ, ಕೃಷ್ಣಾ ನದಿಗೆ ಸುಮಾರು 60,000 ಕ್ಯೂಸೆಕ್ ಒಳಹರಿವು ಬರುತ್ತಿದೆ. ಹೆಚ್ಚುವರಿಯಾಗಿ, ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಸುಮಾರು 40,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದ್ದು, ನದಿಯ ಹೊರಹರಿವು ಮತ್ತಷ್ಟು ಹೆಚ್ಚಾಗಿದೆ.

ಒಂದೂವರೆ ತಿಂಗಳ ಬಳಿಕ ಮಳೆರಾಯನ ಕೃಪೆ; ರಾಜ್ಯದ ಜಲಾಶಯಗಳಲ್ಲಿ ಜೀವಕಳೆ; ಪ್ರಮುಖ ಅಣೆಕಟ್ಟುಗಳಿಗೆ ಒಳಹರಿವು ಹೆಚ್ಚಳ!
ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದ್ದು, ಅಣೆಕಟ್ಟುಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ.

ಮುಂಬೈನಲ್ಲಿ ಮಳೆ ಅವಾಂತರ: ಮನ್ಖುರ್ದ್'ನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; 6 ಮಂದಿ ಸಾವು; Video
ಭಾನುವಾರ ರಾತ್ರಿ ಸುಮಾರು 8.30ರ ವೇಳೆಗೆ ಮನ್ಖುರ್ದ್'ನ ಜನತಾ ನಗರದಲ್ಲಿರುವ ಹನುಮಾನ್ ಮಂದಿರದ ಹಿಂಭಾಗದ ನೆಲಮಹಡಿ ಸೇರಿ ಮೂರು ಮಹಡಿಗಳ ಕಟ್ಟಡದ ಒಂದು ಭಾಗ ಏಕಾಏಕಿ ಕುಸಿದಿದೆ.

'ಡಿಕೆಶಿ CM ಆದ ಕಾಲ್ಗುಣವೋ ಏನೋ ರಾಜ್ಯದಲ್ಲಿ ಬರಗಾಲ ಬಂದಿದೆ; ಬೆಳೆ ಬೆಳೆಯಬೇಡಿ ಎಂದು ಧೈರ್ಯ ಇದ್ದರೆ ತಮಿಳುನಾಡಿನಲ್ಲಿ ಹೇಳಲಿ': R ಅಶೋಕ್
ರೈತರಿಗೆ ಬೆಳೆ ಬೆಳೆಯಬೇಡಿ ಅಂತೀಯಾ ಆದರೆ ಬೆಳೆಗೆ ಪರಿಹಾರ ಏನು ಕೊಡ್ತೀಯಾ ಎಂದು ಸುದ್ದಿಗೋಷ್ಠಿಯಲ್ಲಿ ಸಿಂ ಡಿ ಕೆ ಶಿವಕುಮಾರ್ ಅವರನ್ನು ಏಕವಚನದಲ್ಲಿಯೇ ಆರ್ ಅಶೋಕ್ ಪ್ರಶ್ನೆ ಮಾಡಿದರು.

ಮುಂಗಾರು ಮಳೆ ಕೊರತೆ: ಮೈಸೂರಿನಲ್ಲಿ ವರುಣನಿಗೆ ಕಪ್ಪೆ ಮೆರವಣಿಗೆ ಹೊರಟ ಮಕ್ಕಳು-Video
ಈ ವರ್ಷ ಮುಂಗಾರು ಮಳೆ ಕೊರತೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲೆಯ ತುಂಬಸೋಗೆ ಗ್ರಾಮದ ಗ್ರಾಮಸ್ಥರು ಮಳೆಯಾಗಲೆಂದು ದೇವರನ್ನು ಪ್ರಾರ್ಥಿಸುವ ಉದ್ದೇಶದಿಂದ ಸಾಂಪ್ರದಾಯಿಕ ಕಪ್ಪೆ ಮೆರವಣಿಗೆ ನಡೆಸಿದರು.

