rainfall

ತಮಿಳುನಾಡಿನ ಹಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ
ತಮಿಳುನಾಡಿನ ಹಲವೆಡೆ ಮುಂದಿನ ಏಳು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಹಿಂದೂ ಮಹಾಸಾಗರ ಹಾಗೂ ದಕ್ಷಿಣ ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿದ್ದ ಚಂಡಮಾರುತ ಈಗ ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಯಲ್ಲಿದೆ.

ಭೀಕರ ಬರ: ಬಳ್ಳಾರಿ ಜಿಲ್ಲೆಯಲ್ಲಿ 73 ಸಾವಿರ ಹೆಕ್ಟೇರ್ ಗಿಂತಲೂ ಅಧಿಕ ಕೃಷಿ ಭೂಮಿಯಲ್ಲಿ ಬೆಳೆ ನಷ್ಟ!
ಜಿಲ್ಲೆಯಲ್ಲಿ ಬರಗಾಲಕ್ಕೆ ತುತ್ತಾಗಿರುವ 73,813 ಹೆಕ್ಟೇರ್ ಕೃಷಿ ಭೂಮಿಯನ್ನು ಸಮೀಕ್ಷೆ ನಡೆಸಿ ಜಿಲ್ಲಾಡಳಿತ ಗುರುತಿಸಿದೆ. ರಾಜ್ಯ ಸರಕಾರಕ್ಕೆ ಆಡಳಿತ ಕಳುಹಿಸಿರುವ ವರದಿ ಪ್ರಕಾರ 569 ಕೋಟಿ ರೂಪಾಯಿಗಳಷ್ಟು ಬೆಳೆ ನಷ್ಟವಾಗಿದ್ದು, ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಲ್ಲಿಯೇ ಅತಿ ಹೆಚ್ಚು ಬೆಳೆ ನಷ್ಟವಾಗಿದೆ.

ಮಳೆ ಕೊರತೆ, ಕರ್ನಾಟಕದಿಂದ ತಗ್ಗಿದ ಕಾವೇರಿ ನೀರು ಒಳಹರಿವು: ತಮಿಳು ನಾಡಿನಲ್ಲಿ ಜಲ ವಿದ್ಯುತ್ ಉತ್ಪಾದನೆ ಕುಸಿತ
ಕಾವೇರಿ ಜಲಾನಯನ ಪ್ರದೇಶಗಳಲ್ಲಿನ ಮಳೆಯ ಅಭಾವ ಮತ್ತು ಕರ್ನಾಟಕದಿಂದ ನೀರಿನ ಒಳಹರಿವು ಕಡಿಮೆಯಾದ ಕಾರಣ ತಮಿಳುನಾಡು ಸರ್ಕಾರಿ ಸ್ವಾಮ್ಯದ ಜಲವಿದ್ಯುತ್ ಕೇಂದ್ರಗಳಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತ ಉಂಟಾಗಿದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ
ಮುಂದಿನ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಶೇ 23 ರಷ್ಟು ಮಳೆ ಕೊರತೆ: ಕೊಡಗಿನಲ್ಲಿ ಸರಾಸರಿ ಮಳೆ ಕಡಿಮೆ
ಕರ್ನಾಟಕದಲ್ಲಿ ಜೂನ್ 1 ರಿಂದ ಜುಲೈ 19 ರವರೆಗೆ 27.3 ಸೆಂ.ಮೀ ಮಳೆಯಾಗಿದ್ದು, ಸಾಮಾನ್ಯ 35.35 ಸೆಂ.ಮೀ ಮಳೆಯಾಗಿದ್ದು, ಶೇ. 23ರಷ್ಟು ಕೊರತೆ ಕಂಡಿದೆ.

ಕೊಡಗಿನಾದ್ಯಂತ ಮಳೆಯ ಆರ್ಭಟ: ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ಕೊಡಗಿನಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ಬುಧವಾರ ಮತ್ತು ಗುರುವಾರ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಕಾವೇರಿ ನದಿಯ ಜಲಾನಯನ ಪ್ರದೇಶಗಳು ಕ್ರಮೇಣ ಭರ್ತಿಯಾಗುತ್ತಿವೆ.

ಮುಂಗಾರು ಮಳೆ ವಿಳಂಬ; ರಾಜ್ಯದಲ್ಲಿ ಶೇ.38ರಷ್ಟು ಮಳೆ ಕೊರತೆ
ಮುಂಗಾರು ಪ್ರವೇಶ ವಿಳಂಬವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶೇ.38ರಷ್ಟು ಮಳೆ ಕೊರತೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಂಕಷ್ಟ: ರಾಬಿ ಬೆಳೆಗಳ ಬಿತ್ತನೆಗೆ ಭಾರೀ ಹೊಡೆತ
ಈ ವರ್ಷ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಎದುರಾದ ಅತಿವೃಷ್ಟಿಯು ರಾಜ್ಯದ ಹಲವೆಡೆ ರಾಬಿ ಬೆಳೆಗಳ ಬಿತ್ತನೆಗೆ ಭಾರೀ ಹೊಡೆತವನ್ನು ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ, ಮುಂದಿನ ಐದು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಬುಧವಾರ ತಿಳಿಸಿದೆ.

