rains

ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು: ಹವಾಮಾನ ಇಲಾಖೆ
ಪ್ರಸಕ್ತ ಸಾಲಿನಲ್ಲಿ ಮುಂಗಾರು ವಾಡಿಕೆಗಿಂತಲೂ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಳೆ ಹೊಡೆತಕ್ಕೆ ತತ್ತರಿಸಿದ ಹಿಮಾಚಲ ಪ್ರದೇಶ: ಮೃತರ ಸಂಖ್ಯೆ 74ಕ್ಕೆ ಏರಿಕೆ
ಮಳೆಯಿಂದ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಮೃತಪಟ್ಟವರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. ಶಿಮ್ಲಾದಲ್ಲಿನ ಶಿವ ದೇವಾಲಯವೊಂದರ ಅವಶೇಷಗಳಿಂದ ಮತ್ತೊಂದು ದೇಹವನ್ನು ಹೊರತೆಗೆಯಲಾಗಿದ್ದು, ಚಂಬಾ ಜಿಲ್ಲೆಯಲ್ಲಿ ಮತ್ತಿಬ್ಬರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಪ್ರವಾಹ ಪೀಡಿತ ಯವತ್ಮಾಲ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಜನರ ರಕ್ಷಣೆ
ವರುಣನ ಆರ್ಭಟಕ್ಕೆ ಪೂರ್ವ ಮಹಾರಾಷ್ಟ್ರ ತತ್ತರಿಸಿದ್ದು, ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಹಸಿಲ್‌ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 110 ಜನರನ್ನು ಶನಿವಾರ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರಿ ಮಳೆ: ‘ಮರಗಳು ಧರೆಗುರುಳಲು ಮೂಲಸೌಕರ್ಯ ಯೋಜನೆಗಳೇ ಮೂಲ ಕಾರಣ’
ಕಳಪೆ ಮೂಲಸೌಕರ್ಯ ಯೋಜನೆ, ಸಿಮೆಂಟ್ ಮತ್ತು ಬೇರುಗಳನ್ನು ದುರ್ಬಲಗೊಳಿಸುವುದು ಮತ್ತು ಸೋಂಕಿನಿಂದ ಅವೈಜ್ಞಾನಿಕ ಗಾತ್ರ ತಗ್ಗಿಸುವಿಕೆಯು ಮರ ಬೀಳಲು ಕೆಲವು ಕಾರಣಗಳಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ
ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 12 ಮಿಮೀ ಮಳೆ ಸುರಿದಿದೆ. ಇದು ಕಳೆದ ಮೂರು ವರ್ಷಗಳಲ್ಲಿ ಮಾರ್ಚ್ ತಿಂಗಳಲ್ಲಿ ದಿನವೊಂದರಲ್ಲಿ ಸುರಿದ ಗರಿಷ್ಠ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಐಟಿ ಕಂಪನಿಗಳು ಬೆಂಗಳೂರು ತೊರೆಯುವ ಬೆದರಿಕೆ: ಸರ್ಕಾರದ ವಿರುದ್ಧ ಮುಗಿಬಿದ್ದ ಕಾಂಗ್ರೆಸ್
ಐಟಿ ಕಂಪೆನಿಗಳ ಬೆಂಗಳೂರು ತೊರೆಯುವ ಎಚ್ಚರಿಕೆಯ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಮುಗಿ ಬಿದ್ದಿದೆ. ಈ ಬಗ್ಗೆ ನಿಮ್ಮ ಉತ್ತರವೇನು ಎಂದು ಕಟುವಾಗಿ ಪ್ರಶ್ನಿಸಿದೆ.

ವಿಜಯಪುರ: ಡೋಣಿ ನದಿ ಆರ್ಭಟ, ಕೃಷಿ ಭೂಮಿ ಜಲಾವೃತ, ಬೆಳೆ ನಾಶ
ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಉಕ್ಕಿ ಹರಿಯುತ್ತಿರುವ ಡೋಣಿ ನದಿಯಿಂದ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಾಲ್ಕು ಗ್ರಾಮಗಳು ತೀವ್ರ ರೀತಿಯಲ್ಲಿ ಹಾನಿಗೊಳಗಾಗಿವೆ.

ಬೆಳೆ ನಷ್ಟ ಸಮೀಕ್ಷೆ ನಡೆಸಿ, ಪರಿಹಾರ ಪಾವತಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
ಕಳೆದ ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದ ರಾಜ್ಯದಲ್ಲಿ ಭಾರೀ ಪ್ರಮಾಣದ ಬೆಳೆ ನಷ್ಟವಾಗಿದ್ದು, ಕೂಡಲೇ ಈ ಕುರಿತುಸಮೀಕ್ಷೆ ನಡೆಸಿ, ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡಬೇಕೆಂದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಉತ್ತರಾಖಂಡ್ ಮಳೆ: ಮೃತರ ಸಂಖ್ಯೆ 16ಕ್ಕೆ ಏರಿಕೆ, ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ
ಕಳೆದೆರಡು ದಿನಗಳಿಂದ ಉತ್ತರಾಖಂಡ್ ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ, ಭೂ ಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಚಾರ್ ದಾಮ್ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

