ರಾಜ್ಯರಾಜಹಂಸಗಡ ಕೋಟೆ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಛತ್ರಪತಿ ಶಿವಾಜಿ ಮಹಾರಾಜರ ರಾಜಹಂಸಗಡ ಕೋಟೆಯ ಅಭಿವೃದ್ಧಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲು ಪ್ರವಾಸೋದ್ಯಮ ಸಚಿವರಾದ ಎಚ್ ಕೆ ಪಾಟೀಲ್ ಅವರು ಒಪ್ಪಿಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.