rajanath singh

ಅನಾರೋಗ್ಯ ಕಾರಣದಿಂದ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು: ರಾಜನಾಥ್ ಸಿಂಗ್
2021ರಲ್ಲಿ ಬಿ ಎಸ್ ಯಡಿಯೂರಪ್ಪನವರು ಅನಾರೋಗ್ಯ ಕಾರಣದಿಂದ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದರು. ಬಳಿಕ ಸಿಎಂ ಹುದ್ದೆಗೇರಿದ ಬಸವರಾಜ ಬೊಮ್ಮಾಯಿಯವರು ಕಳೆದ ಒಂದೂವರೆ ವರ್ಷಗಳಿಂದ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಾ ಬಂದಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023: ಬೆಂಗಳೂರಿಗೆ ಬಂದಿಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಲಹಂಕದ ವಾಯುನೆಲೆಯಲ್ಲಿ ನಾಳೆಯಿಂದ ಐದು ದಿನಗಳ ಕಾಲ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು.

'ಏರೋ ಇಂಡಿಯಾ ಈ ಬಾರಿ ಅತಿದೊಡ್ಡ ಏರ್ ಶೋ ಆಗಲಿದೆ': ಸಿಎಂ ಬಸವರಾಜ ಬೊಮ್ಮಾಯಿ
ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 13 ರಿಂದ 17 ರವರೆಗೆ ನಡೆಯಲಿರುವ ಏರೋ ಇಂಡಿಯಾ ಶೋದ 14 ನೇ ಆವೃತ್ತಿಯು ಅತಿ ಹೆಚ್ಚು ಜನರ ಭಾಗವಹಿಸುವಿಕೆಯ ಮೂಲಕ "ಅತಿದೊಡ್ಡ ವೈಮಾನಿಕ ಪ್ರದರ್ಶನ" ಎನಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

ದೇಶಾತೀತವಾಗಿ ಗಡಿಯಾಚೆಗಿನ ಭಯೋತ್ಪಾದನೆಯು ವಿಶ್ವಕ್ಕೇ ಒಂದು ಗಂಭೀರ ಸಮಸ್ಯೆ: ರಾಜನಾಥ್ ಸಿಂಗ್
ಅಂತಾರಾಷ್ಟ್ರೀಯ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯು ಜಗತ್ತು ಎದುರಿಸುತ್ತಿರುವ ಗಂಭೀರ ಬೆದರಿಕೆಯಾಗಿದ್ದು, ಅಂತಾರಾಷ್ಟ್ರೀಯ ಸಮುದಾಯದಿಂದ ತುರ್ತು ಮತ್ತು ದೃಢವಾದ ಮಧ್ಯಸ್ಥಿಕೆ ಅಗತ್ಯವಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕರೆ ನೀಡಿದ್ದಾರೆ.

'ಕಾಶ್ಮೀರಿಯತ್' ಹೆಸರಿನಲ್ಲಿ ನಮ್ಮ ರಾಷ್ಟ್ರ ಕಂಡ ಭಯೋತ್ಪಾದನೆ, ರಕ್ತಪಾತ ವ್ಯಾಖ್ಯಾನಿಸಲು ಅಸಾಧ್ಯ: ರಾಜನಾಥ್ ಸಿಂಗ್
'ಕಾಶ್ಮೀರಿಯತ್' ಹೆಸರಿನಲ್ಲಿ ರಾಷ್ಟ್ರ ಕಂಡ ಭಯೋತ್ಪಾದನೆ ಮತ್ತು ರಕ್ತಪಾತವನ್ನು ವ್ಯಾಖ್ಯಾನಿಸಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಮುಂದಿನ CDS ಆಯ್ಕೆ ಪ್ರಕ್ರಿಯೆ ಆರಂಭ, ಸದ್ಯದಲ್ಲಿಯೇ ಹೆಸರು ಅಂತಿಮಗೊಳಿಸಿ ಘೋಷಣೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥರಾಗಿದ್ದ ಜ.ಬಿಪಿನ್ ರಾವತ್ ತಮಿಳು ನಾಡಿನ ಕೂನ್ನೂರು ಬಳಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹಠಾತ್ ಆಗಿ ನಿಧನ ಹೊಂದಿದ ನಂತರ ಅವರ ಉತ್ತರಾಧಿಕಾರಿ ಎಂಬ ಪ್ರಶ್ನೆ ಉದ್ಭವವಾಗಿದೆ. ಅವರ ಉತ್ತರಾಧಿಕಾರಿಯನ್ನು ನೇಮಿಸುವ ಪ್ರಕ್ರಿಯೆ ಸದ್ಯದಲ್ಲಿಯೇ ಆರಂಭಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಸೇನಾ ಹೆಲಿಕಾಪ್ಟರ್ ದುರಂತ; ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ಆರಂಭ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಮಿ-17 ವಿ-5(Mi-17 V-5 )ಭೀಕರ ದುರಂತಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆ ಕಲಾಪದ ಆರಂಭದಲ್ಲಿ ಹೇಳಿಕೆ ನೀಡಿದ್ದಾರೆ.

ತನ್ನ ಅಗತ್ಯದ ಶೇ. 90ರಷ್ಟು ರಕ್ಷಣಾ ಉತ್ಪನ್ನಗಳನ್ನು ಭಾರತದಲ್ಲೇ ತಯಾರಿಸಲಿದೆ: ರಾಜನಾಥ್ ಸಿಂಗ್
ಅಗತ್ಯವಿರುವ ರಕ್ಷಣಾ ಉತ್ಪನ್ನಗಳ ಶೇಕಡಾ 90ರಷ್ಟನ್ನು ದೇಶವೇ ಉತ್ಪಾದನೆ ಮಾಡಲಿದ್ದು, 2024-25ರ ಹೊತ್ತಿಗೆ 5 ಬಿಲಿಯನ್ ಅಮೆರಿಕ ಡಾಲರ್ ಮೊತ್ತದ ರಕ್ಷಣಾ ಸಾಮಗ್ರಿಗಳನ್ನು ರಫ್ತು ಮಾಡುವಷ್ಟು ಸಮರ್ಥವಾಗಿ ಬೆಳೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

"ಸಾವರ್ಕರ್ ಭಾರತದ ರಾಷ್ಟ್ರಪಿತ": ಬಿಜೆಪಿಯಿಂದ ಶೀಘ್ರವೇ ಇಂತಹ ಘೋಷಣೆಯಾಗಲಿದೆ ಎಂದ ಓವೈಸಿ
ಬಿಜೆಪಿ ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸಲಿದೆ" ಎಂದು ಎಂಐಎಂ ಪಕ್ಷದ ಸ್ಥಾಪಕ ಓವೈಸಿ ಆರೋಪಿಸಿದ್ದಾರೆ.

