ದೇಶಸುಖಾಂತ್ಯದತ್ತ ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಬಂಡಾಯ ನಾಯಕ ಸಚಿನ್ ಪೈಲಟ್ ಮತ್ತೆ 'ಕೈ'ವಶ
ಅಶೋಕ್ ಗೆಹ್ಲೋಟ್ ನೇತೃತ್ವದ ರಾಜ್ಯಸ್ಥಾನದ ಕಾಂಗ್ರೆಸ್ ಸರ್ಕಾರದ ವಿರುದ್ಧ ತಿಂಗಳ ಹಿಂದೆ ಬಂಡಾಯ ಸಾರುವ ಮೂಲಕ ಉಪ ಮುಖ್ಯಮಂತ್ರಿ ಹುದ್ದೆ ಕಳೆದುಕೊಂಡು, ಪಕ್ಷದಿಂದಲೇ ಉಚ್ಚಾಟನೆಗೊಂಡಿದ್ದ ಸಚಿನ್ ಪೈಲಟ್ ಅವರು ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಾಳಯಕ್ಕೆ ಮರಳಲು ಮುಂದಾಗಿದ್ದಾರೆ.