ದೇಶರಾಜಸ್ಥಾನ: ಜೋಧ್ ಪುರದಲ್ಲಿ ಸಿಲಿಂಡರ್ ಸ್ಫೋಟ, ನಾಲ್ಕು ಮಂದಿ ದುರ್ಮರಣ, 16 ಜನರಿಗೆ ಗಾಯ
ರಾಜಸ್ಥಾನದ ಜೋಧ್ ಪುರದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಮೂವರು ಮಕ್ಕಳು ಸೇರಿದಂತೆ ನಾಲ್ಕು ಮಂದಿ ದುರ್ಮರಣ ಹೊಂದಿದ್ದಾರೆ. ಘಟನೆಯಲ್ಲಿ ಇತರ 16 ಮಂದಿ ಗಾಯಗೊಂಡಿದ್ದು, ಅವರೆಲ್ಲರೂ ಎಂಜಿಹೆಚ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.