ದೇಶರಾಮದ್ರೋಹಿಗಳು ರಾಜ್ಯವನ್ನು ಗಲಭೆಯ ಬೆಂಕಿಗೆ ನೂಕಿದರು: ವಿಪಕ್ಷಗಳ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ್ ಕಿಡಿ
ರಾಮದ್ರೋಹಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದದ್ದು ಮಾತ್ರವಲ್ಲದೆ ಸಾಮಾಜಿಕ ಸ್ವಾಸ್ಥ್ಯ ಕೆಡಿಸಿ ಉತ್ತರಪ್ರದೇಶದ ಅಭಿವೃದ್ಧಿಗೆ ಅಡ್ಡಿಪಡಿಸಿ ರಾಜ್ಯವನ್ನು “ಗಲಭೆಗಳ ಬೆಂಕಿಯಲ್ಲಿ ನೂಕಿದರು” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿರೋಧ ಪಕ್ಷಗಳ ವಿರುದ್ಧ ಭಾನುವಾರ ತೀವ್ರವಾಗಿ ಕಿಡಿ ಕಾರಿದ್ದಾರೆ.