Ram Nath Kovind

ದೆಹಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್‌ರನ್ನು ನೇಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್!
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಧಿಕೃತವಾಗಿ ನೇಮಕ ಮಾಡಿದ್ದು 6ನೇ ಸಿಎಂ ಆಗಿ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನವೀನ ಕೃಷಿಯಂತ್ರದ ಆವಿಷ್ಕಾರಕ್ಕೆ ಮೆಚ್ಚುಗೆ, ಒಡಿಶಾ ಬಾಲಕನನ್ನು ಚಹಾಕೂಟಕ್ಕೆ ಆಹ್ವಾನಿಸಿದ ರಾಷ್ಟ್ರಪತಿ
ಕೃಷಿಯಲ್ಲಿ ನವೀನ ಸಂಶೋಧನೆ ಮಾಡಿರುವ ಒಡಿಶಾದ 12 ವರ್ಷದ ಭಾಲಕನಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಚಹಾಕೂಟಕ್ಕೆ ಆಹ್ವಾನ ಬಂದಿದೆ. ಒಡಿಶಾದ ಬಸ್ತಾ ಬ್ಲಾಕ್‌ನ ಮಧುಪುರದ 1ಈ ಬಾಲಕ ಕೃಷಿಯನ್ನು ಸರಳವಾಗಿಸುವ ಸಂಶೋಧನೆ ಮಾಡಿದಾನೆ.

71ನೇ ಗಣರಾಜ್ಯೋತ್ಸವ ಸಂಭ್ರಮ: ರಾಜ್'ಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಕೋವಿಂದ್
ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿ, ಬಹು ನಿರೀಕ್ಷಿತ ಪರೇಡ್'ಗೆ ಚಾಲನೆ ನೀಡಿದ್ದಾರೆ.

ರಾಷ್ಟ್ರಪತಿಗಳಿಂದ ಪ್ರಧಾನಿ ರಾಷ್ಟ್ರೀಯ ಬಾಲ ಪುರಸ್ಕಾರ ಸ್ವೀಕರಿಸಿದ ಬೆಂಗಳೂರಿನ ಯಶ್ ಆರಾಧ್ಯ!
ಬೆಂಗಳೂರಿನ ಯಶ್ ಆರಾಧ್ಯ ಪ್ರತಿಷ್ಠಿತ ಪ್ರಧಾ ನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ಮೋಟಾರ್ ಸ್ಪೋರ್ಟ್ಸ್ ಪಟು ಎನ್ನುವ ಹಿರಿಮೆಗೆ ಗುರುವಾರ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಯಶ್ ಪ್ರಶಸ್ತಿ ಸ್ವೀಕರಿಸಿದರು.

ನಿರ್ಭಯಾ ಪ್ರಕರಣ: ಅಪರಾಧಿಯ ಕ್ಷಮಾದಾನ ಅರ್ಜಿ ರಾಷ್ಟ್ರಪತಿಗಳಿಗೆ ರವಾನೆ
ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಕ್ಷಮಾದಾನ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕಳುಹಿಸಿದ್ದು ಅರ್ಜಿಯನ್ನು ತಿರಸ್ಕರಿಸುವಂತೆ ಶಿಫಾರಸು ಮಾಡಿದೆ.

ಶಿಷ್ಟಾಚಾರ ಮರೆತು 12 ವರ್ಷಗಳ ನಂತರ ಸ್ನೇಹಿತನನ್ನು ಭೇಟಿ ಮಾಡಿದ ರಾಷ್ಟ್ರಪತಿ ಕೋವಿಂದ್
ಭುವನೇಶ್ವರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ಶಿಷ್ಟಾಚಾರ ಮರೆತು 12 ವರ್ಷಗಳ ನಂತರ ತಮ್ಮ ಸ್ನೇಹಿತನನ್ನು ಭೇಟಿ ಮಾಡುವ ಮೂಲಕ ಸರಳತೆ ಮೆರೆದಿದ್ದಾರೆ.

ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಅವಕಾಶ ನೀಡಬಾರದು: ರಾಷ್ಟ್ರಪತಿ
ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಲು ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಹೇಳಿದ್ದಾರೆ.

ಸಾಂವಿಧಾನಿಕ ವ್ಯವಸ್ಥೆಯಲ್ಲಿ ರಾಜ್ಯಪಾಲರು ಪ್ರಮುಖ ಪಾತ್ರ ವಹಿಸುತ್ತಾರೆ: ರಾಮನಾಥ್ ಕೋವಿಂದ್
ಸಾಂವಿಧಾನಿಕ ವ್ಯವಸ್ಥೆಯಲ್ಲಿ ರಾಜ್ಯಪಾಲರು ‘ಪ್ರಮುಖ ಪಾತ್ರ’ ವಹಿಸುತ್ತಾರೆ ಎಂದಿರುವ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವ ಜನರ ಜೀವನವನ್ನು ಸುಧಾರಿಸಲು ರಾಜ್ಯಪಾಲರು ಸರಿಯಾದ ಮಾರ್ಗದರ್ಶನ ನೀಡುವ ಅವಕಾಶ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಕುದುರೆ ವ್ಯಾಪಾರ, ಬಿಎಸ್ ವೈ ಆಡಿಯೋ ಬಗ್ಗೆ ರಾಷ್ಟ್ರಪತಿಗೆ ದೂರು: ಸಿದ್ದರಾಮಯ್ಯ
ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಆಪರೇಷನ್ ಕಮಲ ಕುರಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಯನ್ನೊಳಗೊಂಡ ಆಡಿಯೋ, ವಿಡಿಯೋ ದಾಖಲೆಯನ್ನು....

