Ramalinga Reddy

ಶಕ್ತಿ ಯೋಜನೆ ಹೊರತಾಗಿಯೂ ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆ ಶೇ. 30 ರಷ್ಟು ಹೆಚ್ಚಳ: ಸಚಿವ ರಾಮಲಿಂಗಾ ರೆಡ್ಡಿ
ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ರಾಜ್ಯದಾದ್ಯಂತ ಉಚಿತ ಪ್ರಯಾಣ ಕಲ್ಪಿಸುವ 'ಶಕ್ತಿ' ಯೋಜನೆಯ ಹೊರತಾಗಿಯೂ ಕಳೆದ ಒಂದು ವರ್ಷದಲ್ಲಿ ಮೆಟ್ರೋ ರೈಲಿನ ಪ್ರಯಾಣಿಕರ ಸಂಖ್ಯೆ ಶೇಕಡಾ 30 ರಷ್ಟು ಹೆಚ್ಚಾಗಿದೆ.

ದೇವಸ್ಥಾನ ನಿಧಿ ಬಳಕೆಗೆ ಅವಕಾಶ ನೀಡುವ ಹಿಂದೂ ಧಾರ್ಮಿಕ ದತ್ತಿ ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್
ಮಹತ್ವದ ಬೆಳವಣಿಗೆಯಲ್ಲಿ ದೇವಸ್ಥಾನ ನಿಧಿ ಬಳಕೆ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಅವಧಿಯಲ್ಲಿ ಕರ್ನಾಟಕ ಭಯೋತ್ಪಾದಕರ ತಾಣವಾಗಿತ್ತು: ಸಚಿವ ರಾಮಲಿಂಗಾ ರೆಡ್ಡಿ
ಬಿಜೆಪಿ ಅಧಿಕಾರಾವಧಿಯಲ್ಲಿ ರಾಜ್ಯ 'ಭಯೋತ್ಪಾದಕರ ತಾಣ' ಆಗಿತ್ತು ಎಂದು ಸಚಿವ ಮತ್ತು ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರು ಬುಧವಾರ ಆರೋಪಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ ಹೆಚ್ಚುವರಿ ಬಸ್ ಗಳು: ಸಚಿವ ರಾಮಲಿಂಗಾ ರೆಡ್ಡಿ
ಮುಂದಿನ ಮೂರು ತಿಂಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚಿನ ಬಸ್‌ಗಳನ್ನು ಮಂಜೂರು ಮಾಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಆನ್‌ಲೈನ್ ವಂಚನೆ ತಡೆಯಲು HSRP ಡೆಡ್ ಲೈನ್ ವಿಸ್ತರಣೆ: ಕರ್ನಾಟಕ ಸರ್ಕಾರ
HSRP ಹೆಸರಲ್ಲಿ ಆನ್‌ಲೈನ್ ವಂಚನೆ ವ್ಯಾಪಕವಾಗಿ ನಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ HSRP ಪ್ಲೇಟ್ ಅಳವಡಿಸಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್ ಜಾರಿ
ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

100 ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಬಜೆಟ್ ನಲ್ಲಿ ಹಣ ಒದಗಿಸಿ: ಸರ್ಕಾರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಮನವಿ!
ರಾಜ್ಯದ 100 ರಾಮ ಮಂದಿರಗಳ ಜೀರ್ಣೋದ್ಧಾರಕ್ಕೆ ಬಜೆಟ್ ನಲ್ಲಿ ಹಣ ಮೀಸಲಿಡುವಂತೆ ಸರ್ಕಾರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶನಿವಾರ ಮನವಿ ಮಾಡಿಕೊಂಡಿದ್ದಾರೆ.

ಹಿರೇಮಗಳೂರು ಕಣ್ಣನ್ ರಿಂದ ಹಣ ವಾಪಸ್ ಪಡೆಯಲ್ಲ, ಇದು ತಹಶೀಲ್ದಾರ್ ತಪ್ಪು..: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ
ಪಾವತಿಸಿರುವ ತಸ್ತೀಕ್ ಹಣ ದೇವಾಲಯದ ಆದಾಯಕ್ಕಿಂತ ಹೆಚ್ಚಿದೆ ಎಂಬ ಕಾರಣಕ್ಕೆ ಹಣ ಹಿಂದಿರುಗಿಸುವಂತೆ ಕನ್ನಡದ ಪೂಜಾರಿ ಎಂದು ಪ್ರಸಿದ್ಧವಾಗಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಮುಜರಾಯಿ ಇಲಾಖೆ ನೋಟಿಸ್ ನೀಡಿದ್ದು, ಈ ಕುರಿತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ರಾಜೀವ್ ಗಾಂಧಿ ರಾಮ ಮಂದಿರ ತೆರೆಯಲು ಕ್ರಮ ಕೈಗೊಂಡಿದ್ದರು, ಬಿಜೆಪಿಯವರು ಸುಳ್ಳುಗಾರರು: ರಾಮಲಿಂಗಾ ರೆಡ್ಡಿ
ರಾಮ ಮಂದಿರದ ಶ್ರೇಯಸ್ಸು ಪಡೆಯುತ್ತಿರುವ ಬಿಜೆಪಿಯನ್ನು ಗುರಿಯಾಗಿಸಿಕೊಂಡ ಸಚಿವ ಮತ್ತು ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರು, 'ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ರಾಮ ಮಂದಿರವನ್ನು ತೆರೆಯಲು ಕ್ರಮ ಕೈಗೊಂಡಿದ್ದರು' ಎಂದು ಹೇಳಿದ್ದಾರೆ.

