ರಾಜ್ಯರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಸ್ಥಳಾಂತರ ಮಾಡದಿದ್ದರೆ ಉಗ್ರ ಹೋರಾಟ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರರ ಪೈಕಿ ಇಬ್ಬರಿಗೆ ಕೊರೋನಾ ವೈರಸ್ ತಗುಲಿದ್ದು ಅವರ ಬಗ್ಗೆ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ತಕ್ಷಣವೇ ಸ್ಥಳಾಂತರಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.