Ramanagara

ರಾಮನಗರ: ತಮಿಳುನಾಡು ಸಿಎಂ ಸ್ಟಾಲಿನ್ ಭಾವಚಿತ್ರಕ್ಕೆ ಎಡೆ ಇಟ್ಟು ಶ್ರದ್ಧಾಂಜಲಿ, ಆಕ್ರೋಶ
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಒತ್ತಾಯಿಸಿ ಕನ್ನಡ ಜನಪರ ವೇದಿಕೆ ಕಾರ್ಯಕರ್ತರು ಮಂಗಳವಾರ ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಮನಗರ: ರಾಮದೇವರ ಬೆಟ್ಟದಿಂದ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ!
ಡೀಮ್ಡ್ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಪದವಿ ವಿದ್ಯಾರ್ಥಿ (20) ಬುಧವಾರ ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೋವಿಜ್ಞಾನದಲ್ಲಿ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿಯು ಮರದ ಮೇಲೆ ಸಿಲುಕಿಕೊಂಡಿದ್ದರು ಎಂದು ವರದಿಯಾಗಿದೆ.

ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜ್ ಹೈಜಾಕ್, ಜಿಲ್ಲೆಯ ಜನತೆಗೆ ಮಾಡಿದ ದ್ರೋಹ: ನಿಖಿಲ್ ಕುಮಾರಸ್ವಾಮಿ
ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಹೈಜಾಕ್ ಮಾಡುವ ಮೂಲಕ ಜಿಲ್ಲೆಯ ಜನತೆಗೆ ಕಾಂಗ್ರೆಸ್ ಸರ್ಕಾರ ದ್ರೋಹವೆಸಗಿದೆ ಎಂದು ನಿಖಿಲ್ ಕುಮಾರ್ ಸ್ವಾಮಿ ಆರೋಪಿಸಿದ್ದಾರೆ.

ರಾಮನಗರ: KSRTC ಬಸ್ ಕಾರಿನ ನಡುವೆ ಡಿಕ್ಕಿ: ಕಾರಿನಲ್ಲಿದ್ದ ಆರು ಮಂದಿ ದುರ್ಮರಣ
ಮಲೆ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ದುರ್ಮರಣ ಹೊಂದಿದ್ದಾರೆ.

ಕಾಲೇಜು ಆವರಣದಲ್ಲೇ ಯುವತಿಗೆ ಇರಿದು ಅಪಹರಣ: ಸಾವು-ಬದುಕಿನ ನಡುವೆ ಯುವತಿ, ಯುವಕ ಪೊಲೀಸ್ ವಶಕ್ಕೆ
ಕಾಲೇಜು ಆವರಣದಲ್ಲೇ ಯುವತಿಗೆ ಇರಿದು ಆಕೆಯನ್ನು ಕಾರಿನಲ್ಲಿ ಅಪಹರಣ ಮಾಡಿರುವ ಘಟನೆ ಕರ್ನಾಟಕದ ರಾಮನಗರದಲ್ಲಿ ವರದಿಯಾಗಿದೆ.

ರಾಮನಗರ: ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ; ಆಸ್ಪತ್ರೆಯಲ್ಲಿ ನಾಲ್ಕನೇ ಮಗು ಸಾವು, ಕುಟುಂಬಸ್ಥರ ಪ್ರತಿಭಟನೆ
ಗೊಲ್ಲರದೊಡ್ಡಿಯಲ್ಲಿ ಗೂಡ್ಸ್ ವಾಹನವೊಂದು ಶಾಲಾ ಮಕ್ಕಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ ನಾಲ್ಕಕ್ಕೆ ಏರಿದೆ. ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕಿ ಭಾನುವಾರ ರಾತ್ರಿ ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಬಾಲಕಿ ಶವವನ್ನು ರಸ್ತೆ ಮಧ್ಯೆ ಇಟ್ಟು ಸೋಮವಾರ ಪ್ರತಿಭಟನೆ ನಡೆಸಿದರು.

ನೈಸ್ ಹೆಸರಿನಲ್ಲಿ ಡಿಕೆ ಬ್ರದರ್ಸ್ ಕೊಳ್ಳೆ; ನಾಳೆ ಅಥವಾ ನಾಡಿದ್ದು ದಾಖಲೆ ಬಿಡುಗಡೆ: ಕುಮಾರಸ್ವಾಮಿ
ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರವಿದ್ದಾಗ 'ಜೋಡೆತ್ತು' ಎಂಬಂತೆ ಬಿಂಬಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾವು-ಮುಂಗುಸಿಯಂತಾಗಿದ್ದು, ಪರಸ್ಪರ ಆರೋಪ, ಪ್ರತ್ಯಾರೋಪ, ವಾಗ್ದಾಳಿಯಲ್ಲಿ ನಿರತರಾಗಿದ್ದಾರೆ.

ರಾಮನಗರ: 50 ಸಾವಿರ ರೂ. ಲಂಚ ಸ್ವೀಕಾರ; ಸ್ನೇಹಿತ ಸೇರಿ ಹೆಡ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ
50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಹೆಡ್‌ಕಾನ್ಸ್‌ಟೇಬಲ್ ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಪೊಲೀಸ್ ಪೇದೆಯನ್ನು ರಾಮನಗರದ ಸೈಬರ್ ಕ್ರೈಮ್ಸ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯ ಮಹೇಶ್ (43) ಎಂದು ಗುರುತಿಸಲಾಗಿದೆ.

ರಾಮನಗರದಲ್ಲಿ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ
ರಾಮನಗರದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.

