Ramanagara

ರಾಮನಗರ: ಸಾಲಬಾಧೆಗೆ ಸಿಲುಕಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಯತ್ನ, ಮಹಿಳೆ ಸಾವು!
ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಯತ್ನಿಸಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರದ ಪಿಚ್ಚನಕೆರೆ ಬಳಿ ಶಾಲಾ ಬಸ್ಸಿನಿಂದ ಕೆಳಗೆ ಬಿದ್ದು ಬಾಲಕಿ ಸಾವು: ಶಾಲೆ, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಚಾಲಕ ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ಶಾಲಾ ಬಸ್‌ನಿಂದ ಕೆಳಗೆ ಬಿದ್ದು ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಪಿಚ್ಚನಕೆರೆ ಬಳಿ ನಿನ್ನೆ ಸೋಮವಾರ ಸಂಜೆ ನಡೆದಿದೆ.

ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ; ಡಿಸಿಗೆ ಧಾರ್ಮಿಕ ದತ್ತಿ ಇಲಾಖೆ ಪತ್ರ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮಾದರಿಯಲ್ಲಿಯೇ ರಾಜ್ಯದ ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ರಾಮನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ.

ರಾಮನಗರ: 250 ಪ್ರಕರಣದ ಬೇಧಿಸಿದ್ದ 'ರಾಮ್' ಹೃದಯಾಘಾತದಿಂದ ಸಾವು: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!
ರಾಮನಗರದಲ್ಲಿ ಕಳೆದ ಆರು ವರ್ಷಗಳಿಂದ ಅಪರಾಧ ಪತ್ತೆ ಕಾರ್ಯಾಚರಣೆಯಲ್ಲಿ ನಿಷ್ಣಾತನಾಗಿದ್ದ ಶ್ವಾನ ರಾಮ್ ಹೃದಯಾಘಾತದಿಂದ ಸಾವನ್ನಪ್ಪಿದೆ.

ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ಅಭಿವೃದ್ಧಿ: ಯೋಜನೆ ರೂಪಿಸಲು ಸಿಎಂ ಸೂಚನೆ- ಸಚಿವ ಅಶ್ವತ್ಥ್ ನಾರಾಯಣ
ರಾಮನಗರದಲ್ಲಿರುವ ಪ್ರಸಿದ್ಧ ರಾಮ ದೇವರ ಬೆಟ್ಟದಲ್ಲಿ ಅಯೋಧ್ಯೆಯ ರಾಮ ಮಂದಿರದ ಮಾದರಿ ದೇವಾಲಯ ನಿರ್ಮಾಣ, ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಸೂಚನೆ ನೀಡಿದ್ದಾರೆ.

ರಾಮದೇವರ ಬೆಟ್ಟವನ್ನು ದಕ್ಷಿಣದ ಅಯೋಧ್ಯೆಯನ್ನಾಗಿ ಅಭಿವೃದ್ಧಿ ಮಾಡಿ: ಮುಖ್ಯಮಂತ್ರಿಗೆ ಸಚಿವ ಅಶ್ವತ್ಥ್ ನಾರಾಯಣ ಪತ್ರ
ರಾಜ್ಯದ ರಾಮನಗರ ಜಿಲ್ಲೆಯಲ್ಲಿನ ರಾಮದೇವರಬೆಟ್ಟವನ್ನು ದಕ್ಷಿಣದ ಅಯೋಧ್ಯೆಯನ್ನಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ರಾಮನಗರ ಜಿಲ್ಲೆಯಲ್ಲಿ 'ಮಕ್ಕಳ ಗ್ರಾಮ ಸಭೆ': ಶಾಲೆಯ ಅಗತ್ಯತೆ, ಮೂಲಸೌಕರ್ಯಗಳ ಬಗ್ಗೆ ವಿದ್ಯಾರ್ಥಿಗಳಿಂದ ಚರ್ಚೆ!
ರಾಮನಗರ ಜಿಲ್ಲೆಯ ಗೋಪಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಕ್ಕಳ ಗ್ರಾಮ ಸಭೆ ಗುರುವಾರ ನಡೆಯಿತು.

ರಾಮನಗರ: ಧಾರ್ಮಿಕ ಮತಾಂತರದ ವಿರುದ್ಧ ದೂರು ಸಲ್ಲಿಸಿದ ಹಿಂದೂ ಜಾಗರಣ ವೇದಿಕೆ
ಹಿಂದೂ ಜಾಗರಣ ವೇದಿಕೆ ಮತ್ತು ಗ್ರಾಮಸ್ಥರು ಬುಧವಾರ ರಾಮನಗರ ಜಿಲ್ಲೆಯ ಫಾರ್ಮ್ ಹೌಸ್‌ನಲ್ಲಿ ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಫಲಶ್ರುತಿ: ಪ್ರವಾಹ ಪೀಡಿತ ವಿದ್ಯಾರ್ಥಿಗಳ ಅಕ್ಷರಾಭ್ಯಾಸಕ್ಕೆ ಸಮೀಪದ ಶಾಲೆಯಲ್ಲಿ ವ್ಯವಸ್ಥೆ!
ರಾಮನಗರ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಹಾಗೂ ಇತರ ಅಧಿಕಾರಿಗಳು ಸೋಮವಾರ ಚನ್ನಪಟ್ಟಣ ಪಟ್ಟಣದ ತಟ್ಟೆಕೆರೆಯಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲಾ ಆವರಣದಲ್ಲಿರುವ ನೀರು ಹೊರಹಾಕಲು ಕ್ರಮ ಕೈಗೊಂಡಿದ್ದಾರೆ.

