Ramesh Jarkiholi

ಸಂಪುಟ ಸೇರಲು ಲಾಬಿ: ದೆಹಲಿಯಲ್ಲಿ ಬಿಜೆಪಿ, ಆರ್ ಎಸ್ ಎಸ್ ಮುಖಂಡರನ್ನು ಭೇಟಿಯಾದ ಜಾರಕಿಹೊಳಿ
ಸಂಪುಟ ಸೇರಲು ಲಾಬಿ ನಡೆಸುತ್ತಿರುವ ಮಾಜಿ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ಸಂಜೆ ದೆಹಲಿಯಲ್ಲಿ ಅನೇಕ ಬಿಜೆಪಿ ಹಾಗೂ ಆರ್ ಎಸ್ ಎಸ್ ಮುಖಂಡರನ್ನು ಭೇಟಿಯಾದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ಇಲ್ಲ; ರಮೇಶ್ ಜಾರಕಿಹೊಳಿ ಮುಂಬಯಿ ಪ್ರವಾಸ ರದ್ಧು: ಶೀಘ್ರದಲ್ಲೆ ನಿರ್ಧಾರ ಪ್ರಕಟ!
ಮತ್ತೆ ಸಂಪುಟಕ್ಕೆ ಸೇರಲು ಕೇಂದ್ರ ಬಿಜೆಪಿ ನಾಯಕರ ಮೇಲೆ ಒತ್ತಡ ಹೇರುವಲ್ಲಿ ವಿಫಲವಾಗಿರುವ ಜಲ ಸಂಪನ್ಮೂಲ ಖಾತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದರು.

ಮತ್ತೆ ಸಂಪುಟ ಸೇರಲು ಕಸರತ್ತು: ಆರ್ ಎಸ್ ಎಸ್ ಮುಖಂಡರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ!
ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಮತ್ತೆ ರಾಜ್ಯ ಸಂಪುಟದೊಳಗೆ ಸೇರಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಮನಸ್ಸು ಮಾಡದಿದ್ದರೂ, ಸಂಪುಟಕ್ಕೆ ಮರಳುವ ಕೊನೆಯ ಪ್ರಯತ್ನದಲ್ಲಿ ಮುಖಂಡರು ಮತ್ತು ಶ್ರೀಗಳನ್ನು ಜಾರಕಿಹೊಳಿ ಭೇಟಿ ಮಾಡುತ್ತಿದ್ದಾರೆ.

ಸಚಿವ ಸ್ಥಾನ ದೊರಕದ್ದಕ್ಕೆ ಬೇಸರ: ಸರ್ಕಾರದ ಮೇಲೆ ಒತ್ತಡ ಹೇರಲು ರಮೇಶ್ ಜಾರಕಿಹೊಳಿ ಮುಂದು
ಸಚಿವ ಸ್ಥಾನ ಸಿಗದ್ದಕ್ಕೆ ಬೇಸರಗೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು, ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳದಿರುವುದಕ್ಕೆ ಬೇಸರ: ಮಹಾರಾಷ್ಟ್ರ ತೆರಳಿ ಫಡ್ನವೀಸ್ ಭೇಟಿಯಾದ ಜಾರಕಿಹೊಳಿ
ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳ್ಳದಿರುವುದು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಕ್ಕೆ ಭೇಟಿ ನೀಡಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

'ಸಾಹುಕಾರ್' ರಾಜಿನಾಮೆ ನಂತರ ಖಾಲಿ ಉಳಿದಿರುವ ಖಾತೆ: ಮತ್ತೆ ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ದುಂಬಾಲು!
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಂಬಂಧ ಚರ್ಚೆ ನಡೆಯುವ ಸಾಧ್ಯತೆಯಿದೆ.

ಸಿಡಿ ಕೇಸ್ ಯುವತಿಯಿಂದ ಅರ್ಜಿ: ಎಸ್ ಐಟಿ, ಮಾಜಿ ಸಚಿವ ಜಾರಕಿಹೊಳಿಗೆ ಹೈಕೋರ್ಟ್ ನೋಟಿಸ್
ಸಿಡಿ ಕೇಸ್ ಯುವತಿ ಸಲ್ಲಿಸಿದ ಅರ್ಜಿ ಕುರಿತು ಈ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ವಿಶೇಷ ತನಿಖಾ ತಂಡಕ್ಕೆ (ಎಸ್ ಐಟಿ) ಹೈಕೋರ್ಟ್ ಸೋಮವಾರ ನೋಟಿಸ್ ನೀಡಿದೆ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಿಂಗ್ ಪಿನ್ ನರೇಶ್ ಗೌಡ, ಶ್ರವಣ್ ಎಸ್ ಐಟಿ ಮುಂದೆ ಹಾಜರು
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಸಿಡಿ ಪ್ರಕರಣ: ನರೇಶ್ ಗೌಡ ಮತ್ತು ಶ್ರವಣ್ ಗೆ ನಿರೀಕ್ಷಣಾ ಜಾಮೀನು
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್ ಗೌಡ ಮತ್ತು ಶ್ರವಣ್ ಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

