Rameshwarama Cafe Blast

ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ತಮಿಳಿಗರ ಕೈವಾಡ: ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಹೇಳಿಕೆ ಹಿಂಪಡೆದ ಶೋಭಾ ಕರಂದ್ಲಾಜೆ
ಇತ್ತೀಚೆಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೂ ತಮಿಳುನಾಡಿನ ವ್ಯಕ್ತಿಗಳಿಗೂ ಸಂಬಂಧವಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇದೀಗ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎನ್ಐಎಗೆ ಮಹತ್ವದ ಸುಳಿವು, ಶಂಕಿತ ಬಳಸಿದ್ದ ದೂರವಾಣಿ ಕರೆ ಜಾಡು ಹಿಡಿದ ತನಿಖಾ ತಂಡ
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತಂಡವು ಇಂದು ಬೆಳಗ್ಗೆ ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದಲ್ಲಿ ಶಬೀರ್ ಮೊಹಮ್ಮದ್ ಎಂಬಾತನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ; NIAಗೆ ಮಹತ್ವದ ಸುಳಿವು, ಮೂವರು ಶಂಕಿತರು ವಶಕ್ಕೆ!
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ಐಎಗೆ ಮಹತ್ವದ ಸುಳಿವು ಸಿಕ್ಕಿದೆ. ಈ ಸಂಬಂಧ ಮತ್ತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಆರೋಪಿ ಫೋಟೋ ಬಿಡುಗಡೆ; ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿರುವ ಎನ್ಐಎ ಬಾಂಬರ್ ಫೋಟೋ ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಎಲ್ಲಾ ಆಯಾಮಗಳಲ್ಲಿ ತನಿಖೆ- ಡಾ. ಜಿ. ಪರಮೇಶ್ವರ್
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಗಳ ಕುರಿತು 8 ತಂಡಗಳನ್ನು ರಚಿಸಿ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭಾನುವಾರ ಹೇಳಿದ್ದಾರೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ರಾಜ್ಯಕ್ಕೆ ಬೆದರಿಕೆ, ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಒಪ್ಪಿಸುವಂತೆ ರಾಜ್ಯ ಸರ್ಕಾರವನ್ನು ಬಿಜೆಪಿ ಒತ್ತಾಯಿಸಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ತೀವ್ರವಾಗಿ ಗಾಯಗೊಂಡ ಮಹಿಳಾ ಟೆಕ್ಕಿಗೆ ಶೇ.40 ರಷ್ಟು ಸುಟ್ಟ ಗಾಯ
ಶುಕ್ರವಾರ ಮಧ್ಯಾಹ್ನ ಸಂಭವಿಸಿದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ 10 ಜನರ ಪೈಕಿ 46 ವರ್ಷದ ಮಹಿಳೆಗೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದು, ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

