Ramnagar

ವಿರೂಪಗೊಂಡ ಸ್ಥಿತಿಯಲ್ಲಿ ಪ್ರಧಾನಿ ಮೋದಿ ಭಾವಚಿತ್ರ: ಸಿಎಂ ಫೋಟೋಗೆ ಮಸಿ ಬಳಿದು ಬಿಜೆಪಿ ಕಾರ್ಯಕರ್ತರ ಆಕ್ರೋಶ
ಪಶು ಇಲಾಖೆಗೆ ಸೇರಿದ ಚಿಕಿತ್ಸಾ ವಾಹನದ ಮೇಲಿದ್ದ ಪ್ರಧಾನಿ ಮೋದಿಯವರ ಭಾವಚಿತ್ರ ವಿರೂಪಗೊಂಡಿದ್ದನ್ನು ಕಂಡ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆಯಿತು.

ಕೋವಿಡ್ ಜೆಎನ್.1 ರೂಪಾಂತರಿ: ರಾಮನಗರ ಜಿಲ್ಲೆಯ ವಿದ್ಯಾರ್ಥಿಗೆ ಕೊರೋನಾ ಸೋಂಕು ದೃಢ
ಮಂಡ್ಯ ಜಿಲ್ಲೆಯ ಮದ್ದೂರಿನ ವೃದ್ಧರೊಬ್ಬರಿಗೆ ಕೋವಿಡ್ ಪಾಸಿಟಿವ್ ವರದಿಯಾದ ಬಳಿಕ ರಾಮನಗರ ಜಿಲ್ಲೆಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಮನಗರ: ದರ್ಗಾ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ದರ್ಗಾದ ಪ್ರಸಾದ ಸೇವಿಸಿ ರಾಮನಗರದಲ್ಲಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ನವೆಂಬರ್ 1ರ ನಂತರ ಚರ್ಚೆಗೆ ಡೇಟ್, ಟೈಮ್ ಫಿಕ್ಸ್ ಮಾಡಿಕೊಂಡು ಬನ್ನಿ: ಡಿ ಕೆ ಶಿವಕುಮಾರ್
ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರದಲ್ಲಿ ಉಂಟಾಗಿರುವ ರಾಜಕೀಯ ಕದನ ಇಬ್ಬರು ಪ್ರಮುಖ ನಾಯಕರ ಮಾತಿನ ಯುದ್ಧಕ್ಕೆ ಕಾರಣವಾಗಿದೆ. ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಗೆ ಸವಾಲು ಹಾಕಿದ್ದರು.

ವೇತನ ನೀಡುವಂತೆ ಆಗ್ರಹ: ಮೈಮೇಲೆ ಮಲ ಸುರಿದುಕೊಂಡು ಪೌರಕಾರ್ಮಿಕರ ಪ್ರತಿಭಟನೆ
15 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಇಬ್ಬರು ಪೌರಕಾರ್ಮಿಕರು ತಮ್ಮ ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮಂಗಳವಾರ ನಡೆದಿದೆ.

ರಾಮನಗರದಲ್ಲಿ ಭೀಕರ ಅಪಘಾತ: ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ, ಇಬ್ಬರ ಸಾವು
ರಾಮನಗರದಲ್ಲಿ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು, ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ಮಾಗಡಿ: ಚುನಾವಣೆ ವೇಳೆ ವಿತರಿಸಲ್ಪಟ್ಟ ಕುಕ್ಕರ್ ಸ್ಫೋಟ; ಬಾಲಕಿಗೆ ಗಾಯ
ಚುನಾವಣಾ ಪ್ರಚಾರದ ವೇಳೆ ರಾಜಕೀಯ ಪಕ್ಷವೊಂದು ಉಚಿತವಾಗಿ ನೀಡಿದ್ದ ಪ್ರೆಶರ್ ಕುಕ್ಕರ್'ವೊಂದು ಅಡುಗೆ ಮಾಡುವಾಗ ಸ್ಫೋಟಗೊಂಡು 17 ವರ್ಷದ ಬಾಲಕಿ ಗಾಯಗೊಂಡಿರುವ ಘಟನೆ ರಾಮನಗರದ ಮಾಗಡಿಯಲ್ಲಿ ನಡೆದಿದೆ.

ರಾಮನಗರ: ಕುರಿ ತೊಳೆಯಲು ಹೋಗಿದ್ದಾಗ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮುತ್ತ ಸಾಗರ ಗ್ರಾಮದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶಾಲೆಗೆ ಬಿಟ್ಟು ಬರಲು ಹೋಗುತ್ತಿದ್ದಾಗ ದುರಂತ; ಬೈಕ್-ಕಾರು ಡಿಕ್ಕಿ, ತಂದೆ-ಮಗಳು ಸಾವು
ಶಾಲೆಗೆ ಮಗಳ ಬಿಟ್ಟು ಬರಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ದುರಂತ ಘಟನೆ ರಾಮನಗರದಲ್ಲಿ ನಡೆದಿದೆ.

