Randeep Singh Surjewala

ಕರ್ನಾಟಕಕ್ಕೆ ತಕ್ಷಣ ಬರ ಪರಿಹಾರ ಬಿಡುಗಡೆ ಮಾಡಿ: ಕೇಂದ್ರಕ್ಕೆ ಸುರ್ಜೇವಾಲಾ ಆಗ್ರಹ; ಬಿಜೆಪಿ ಸಂಸದರ ಮೌನ ಪ್ರಶ್ನಿಸಿದ ಕಾಂಗ್ರೆಸ್
ಯಾವುದೇ ವಿಳಂಬ ಮಾಡದೆ ತಕ್ಷಣ ಕರ್ನಾಟಕಕ್ಕೆ ಬರ ಪರಿಹಾರ ಸೇರಿದಂತೆ ರಾಜ್ಯಕ್ಕೆ ಕೇಂದ್ರದ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ...

5ನೇ ಗ್ಯಾರಂಟಿ ‘ಯುವನಿಧಿ’ ಯೋಜನೆ ಇದೇ ತಿಂಗಳಲ್ಲಿ ಜಾರಿ: ಸುರ್ಜೆವಾಲಾ
ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷ ನೀಡಿದ್ದ 5 ‘ಗ್ಯಾರಂಟಿ’ ಯೋಜನೆಗಳ ಪೈಕಿ 4 ಯೋಜನೆ ಅನುಷ್ಠಾನಗೊಂಡಿದ್ದು, 5ನೇ ಗ್ಯಾರಂಟಿ ಯುವನಿಧಿ ಯೋಜನೆಯನ್ನು ಇದೇ ತಿಂಗಳಿ (ಡಿಸೆಂಬರ್)ನಲ್ಲಿ ನಮ್ಮ ಸರಕಾರ ಜಾರಿಗೊಳಿಸಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶನಿವಾರ ಹೇಳಿದ್ದಾರೆ.

ನಿಗಮ-ಮಂಡಳಿ ನೇಮಕ: ಪಟ್ಟಿ ಅಂತಿಮಗೊಂಡ ಬಳಿಕ ಅನುಮೋದನೆಗಾಗಿ ಹೈಕಮಾಂಡ್‌ಗೆ ರವಾನೆ; ಡಿಕೆ ಶಿವಕುಮಾರ್
ಆಡಳಿತಾರೂಢ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರನ್ನು ರಾಜ್ಯ ಸರ್ಕಾರದ ಅಧೀನದ ವಿವಿಧ ನಿಗಮ - ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ ಮತ್ತು ಈ ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ಅನುಮೋದನೆಗಾಗಿ ಪಕ್ಷದ ಹೈಕಮಾಂಡ್‌ಗೆ ಕಳುಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

ಶಿಸ್ತು ಉಲ್ಲಂಘಿಸಿದರೆ, ಪಕ್ಷದ ಚೌಕಟ್ಟು ಮೀರಿದರೆ ಕ್ರಮ: ಕಾಂಗ್ರೆಸ್ ಶಾಸಕ, ಸಚಿವರಿಗೆ ಸುರ್ಜೇವಾಲ ಎಚ್ಚರಿಕೆ
ಕಾಂಗ್ರೆಸ್ ಶಾಸಕರು ಮತ್ತು ಸಚಿವರ ವಿಭಿನ್ನ ಹೇಳಿಕೆಗಳು ಹೆಚ್ಚಾಗುತ್ತಿರುವಂತೆಯೇ ಎಚ್ಚೆತ್ತುಕೊಂಡ ಹೈಕಮಾಂಡ್, ಪಕ್ಷದ ಚೌಕಟ್ಟು ಮೀರಿದರೆ, ಶಿಸ್ತು ಉಲ್ಲಂಘಿಸಿದರೆ ಹಾಗೂ ಪಕ್ಷದ ಆಂತರಿಕ ವಿಚಾರಗಳನ್ನು ಬಾಹ್ಯವಾಗಿ ಚರ್ಚೆ ಮಾಡಿದರೆ ಸೂಕ್ತ...

ಅಧಿಕಾರಿಗಳ ಸಭೆಯಲ್ಲಿ ರಂದೀಪ್ ಸಿಂಗ್ ಸುರ್ಜೆವಾಲಾ ಉಪಸ್ಥಿತಿ: ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರಿನಲ್ಲಿ ನಿನ್ನೆ ಅಧಿಕಾರಿಗಳ ಜೊತೆಗೆ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಕೂಡ ಉಪಸ್ಥಿತರಿದ್ದರು. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೆರಳಿ ಕೆಂಡವಾಗಿದ್ದು ಸುರ್ಜೆವಾಲಾ ಸರ್ಕಾರದ ಕೆಲಸದಲ್ಲಿ ಮೂಗು ತೂರಿಸುವುದೇಕೆ ಎಂದು ಪ್ರಶ್ನಿಸುತ್ತಿದ್ದಾರೆ.

ಸಚಿವ ಸ್ಥಾನ ಸಿಗದೆ ಮಧು ಬಂಗಾರಪ್ಪ ಅಸಮಾಧಾನ: ಶಿವಣ್ಣ ದಂಪತಿ ಭೇಟಿಯಾದ ಸುರ್ಜೇವಾಲ!
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಶಿವರಾಜ್ ಕುಮಾರ್ ದಂಪತಿ ಮನೆಗೆ ಭೇಟಿ ನೀಡಿದ್ದಾರೆ. ನಾಗವಾರದಲ್ಲಿರುವ ಸೆಂಚುರಿ ಸ್ಟಾರ್ ನಿವಾಸಕ್ಕೆ ತೆರಳಿರುವ ಸುರ್ಜೇವಾಲ, ಶಿವಣ್ಣನ ಜೊತೆಗೆ ಮಾತುಕತೆ ನಡೆಸಿದ್ದು, ಧನ್ಯವಾದ ಸಲ್ಲಿಸಿದ್ದಾರೆ.

ಜನಸೇವೆ ನಮ್ಮ ಏಕೈಕ ಸೂತ್ರ, ಸಂವಿಧಾನ ಉಳಿಸಲು ಬಯಸುವವರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಬಹುದು: ಸುರ್ಜೇವಾಲಾ
ಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಮತ್ತು ಸಂವಿಧಾನವನ್ನು ಉಳಿಸಲು ಬಯಸುವವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗುರುವಾರ ಹೇಳಿದ್ದಾರೆ.

ಮತಗಟ್ಟೆ ಸಮೀಕ್ಷೆಯಲ್ಲಿ 'ಕೈ' ಮೇಲು: ಸಿದ್ದರಾಮಯ್ಯ ನಿವಾಸದಲ್ಲಿ ಗರಿಗೆದರಿದ ಕಾಂಗ್ರೆಸ್ ನಾಯಕರ ರಣತಂತ್ರ!
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ಕ್ಕೆ ಮತದಾನ ಮುಗಿದು ಎಲ್ಲರೂ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಈ ಮಧ್ಯೆ ನಿನ್ನೆ ಸಾಯಂಕಾಲ ಹೊರಬಿದ್ದ ಬಹುತೇಕ ಮತದಾನೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಗೆ ಈ ಬಾರಿ ಬಹುಮತ ಸಿಗಲಿದೆ.

ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಫಲಿತಾಂಶ; ಚುನಾವಣಾ ಪ್ರಚಾರ ತಂತ್ರ ರೂಪಿಸಿದ ಪ್ರಮುಖ ನಾಯಕರಿವರು
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಬುಧವಾರ ಮತದಾನ ಮುಕ್ತಾಯವಾಗಿದ್ದು, ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಉತ್ಸಾಹದ ಪ್ರಚಾರ ನಡೆಸಿದ ಐವರು ನಾಯಕರು ಇವರಾಗಿದ್ದಾರೆ.

