rape case

ಮೇ 19ಕ್ಕೆ ತರುಣ್ ತೇಜ್‌ಪಾಲ್ ವಿರುದ್ಧದ ಅತ್ಯಾಚಾರ ಪ್ರಕರಣ ತೀರ್ಪು ಪ್ರಕಟ: ಗೋವಾ ಕೋರ್ಟ್
ಮಾಜಿ ತೆಹಲ್ಕಾ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ವಿರುದ್ಧ ದಾಖಲಾಗಿರುವ ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಪನ್ನು ಮೇ 19 ರಂದು ಪ್ರಕಟಿಸುವುದಾಗಿ ಗೋವಾದ ಸೆಷನ್ಸ್ ನ್ಯಾಯಾಲಯ ಬುಧವಾರ ತಿಳಿಸಿದೆ.

ವಿವಾಹಿತ ಮಹಿಳೆಗೆ ಬೆದರಿಕೆ, ಒಂದು ವರ್ಷದಿಂದ ಅತ್ಯಾಚಾರ: ಹಾವೇರಿ ನಗರಸಭೆ ಮಾಜಿ ಸದಸ್ಯ ಬಂಧನ
ಆ್ಯಸಿಡ್ ಹಾಕುವುದಾಗಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಕಳೆದ ಒಂದು ವರ್ಷದಿಂದ ಅತ್ಯಾಚಾರ ನಡೆಸುತ್ತಾ ಬಂದಿದ್ದ ಹಾವೇರಿ ನಗರಸಭೆ ಮಾಜಿ ಸದಸ್ಯನನ್ನು ಪೋಲೀಸರು ಬಂಧಿಸಿದ್ದಾರೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಎಸ್ಐಟಿ ತನಿಖೆ ಪೂರ್ಣ, ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಕೆ
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಪೂರ್ಣಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಶೀಘ್ರದಲ್ಲಿಯೇ ಉತ್ತರಪ್ರದೇಶ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಹತ್ರಾಸ್: ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ವೈ ಶ್ರೇಣಿ ಭದ್ರತೆಗೆ ಭೀಮ್ ಆರ್ಮಿ ಮುಖ್ಯಸ್ಥ ಒತ್ತಾಯ
ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟಿದ್ದಾಳೆ ಎನ್ನಲಾದ 19 ವರ್ಷದ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ ವೈ ಶ್ರೇಣಿ ಭದ್ರತೆ ನೀಡಬೇಕು, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಒತ್ತಾಯಿಸಿದ್ದಾರೆ.

'ಎಂದಿಗೂ 'ತಲೆಬಾಗುವುದಿಲ್ಲ': ಗಾಂಧೀ ಜಯಂತಿ ಹಿನ್ನೆಲೆ ಹತ್ರಾಸ್ ಪ್ರತಿಭಟನೆ ಘಟನೆ ನೆನೆದು ರಾಹುಲ್ ಹೇಳಿಕೆ
ಅನ್ಯಾಯ ಮಾಡುವವರ ಎದುರು ಎಂದಿಗೂ ತಲೆಬಾಗುವುದಿಲ್ಲ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಹತ್ರಾಸ್ ಪ್ರತಿಭಟನೆ ಘಟನೆ ನೆನೆದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಹೇಳಿಕೆ ದಾಖಲಿಸಿದ ನಿರ್ದೇಶಕ ಅನುರಾಗ್ ಕಶ್ಯಪ್
ನಟಿ ಪಾಯಲ್ ಘೋಷ್ ಅವರು ದಾಖಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಗುರುವಾರ ಇಲ್ಲಿನ ವರ್ಸೋವಾ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

ನನ್ನ ಮಗುವಿನ ಅಪ್ಪ ಶಾಸಕ ಮಹೇಶ್ ನೇಗಿ: ಬೇಕಾದರೆ ಡಿಎನ್ಎ ಪರೀಕ್ಷೆ ಮಾಡಿಸಿ; ಮಹಿಳೆ ಸವಾಲ್
ಉತ್ತರಾಖಂಡದ ಬಿಜೆಪಿ ಶಾಸಕ ಮಹೇಶ್ ನೇಗಿಯ ವಿರುದ್ಧ ರೇಪ್ ಕೇಸ್ ದಾಖಲಿಸಿರುವ ಮಹಿಳೆಯೊಬ್ಬರು, ತನ್ನ ಮಗುವಿನ ಅಪ್ಪ ನೇಗಿಯೇ ಆಗಿದ್ದು, ಮಗುವಿನ ಡಿಎನ್ಎ ಟೆಸ್ಟ್ ಮಾಡಿಸಿ ಸವಾಲು ಹಾಕಿದ್ದಾರೆ.

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಕಾಮುಕನಿಗೆ 7 ವರ್ಷ ಕಠಿಣ ಶಿಕ್ಷೆ
ಯುವತಿಯೊಬ್ಬರಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿ ಕೈಕೊಟ್ಟಿದ್ದ ಕಾಮುಕನಿಗೆ ಮಂಗಳೂರು ಕೋರ್ಟ್ ಏಳು ವರ್ಷ ಕಠಿಣ ಶಿಕ್ಷೆ ವಿಧಿಸಿದೆ.

ಗಡುವಿಗೆ ಮುನ್ನವೇ ಡೆತ್ ವಾರೆಂಟ್ ಜಾರಿ: ಅಧೀನ ನ್ಯಾಯಾಲಯಗಳ ಪ್ರವೃತ್ತಿಗೆ ಸುಪ್ರೀಂ ಗರಂ
ಮರಣ ದಂಡನೆ ಶಿಕ್ಷೆಗೊಳಗಾಗಿರುವ ಅಪರಾಧಿಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಇರುವ ಗಡುವಿಗೆ ಮುನ್ನವೇ ವಿಚಾರಣಾ ನ್ಯಾಯಾಲಯಗಳು ಡೆತ್ ವಾರಂಟ್ ಜಾರಿಗೊಳಿಸಲು ಆದೇಶ ನೀಡುತ್ತಿರುವ ಪ್ರವೃತ್ತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ.

