ರಾಜ್ಯಮೀಸಲಾತಿ ವಿವಾದ: ಮಾರ್ಚ್ 4 ರಂದು ರಸ್ತೆ ತಡೆದು ಪ್ರತಿಭಟನೆ ನಡೆಯಲು ಪಂಚಮಸಾಲಿ ಲಿಂಗಾಯತರು ಮುಂದು
ಹಿಂದುಳಿದ ವರ್ಗಗಳ ‘2ಎ’ ಮೀಸಲಾತಿಗೆ ಪಂಚಮಸಾಲಿ ಸಮಾಜ ಸೇರ್ಪಡೆಗೊಳಿಸಲು ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಮಾರ್ಚ್ 4ಕ್ಕೆ 50 ದಿನಗಳನ್ನು ಪೂರೈಸುತ್ತಿದ್ದು, ಈ ನಡುವಲ್ಲೇ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಪಂಚಮಸಾಲಿ ಲಿಂಗಾಯತರು ನಿರ್ಧರಿಸಿದ್ದಾರೆ.