ದೇಶ9 ರಿಂದ 12ನೇ ತರಗತಿವರೆಗೆ ಸಿಬಿಎಸ್ಇ ಪಠ್ಯಕ್ರಮ ಶೇ. 30ರಷ್ಟು ಕಡಿತ
ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ನಿಗದಿಯಂತೆ ಶೈಕ್ಷಣಿಕ ವರ್ಷ ಆರಂಭವಾಗದೆ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳ ಸಹಾಯಕ್ಕೆ ಧಾವಿಸಿರುವ ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ಇ) 9 ರಿಂದ 12 ತರಗತಿ ವಿದ್ಯಾರ್ಥಿಗಳ ಪಠ್ಯಕ್ರಮವನ್ನು ಶೇ. 30ರ ವರೆಗೆ ಕಡಿತಗೊಳಿಸಲು ನಿರ್ಧರಿಸಿದೆ.