ದೇಶದೇಶದ 508 ರೈಲು ನಿಲ್ದಾಣಗಳ ನವೀಕರಣಕ್ಕೆ ಶಂಕುಸ್ಥಾಪನೆ: ಪ್ರಧಾನಿ ಮೋದಿಯಿಂದ ವರ್ಚುವಲ್ ಮೂಲಕ ಉದ್ಘಾಟನೆ
ಅಮೃತ ಭಾರತ ಸ್ಟೇಷನ್ ಯೋಜನೆಯಡಿಯಲ್ಲಿ ದೇಶದಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಇಂದು ಭಾನುವಾರ ವರ್ಚ್ ವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಈ ಮೂಲಕ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 508 ರೈಲು ನಿಲ್ದಾಣಗಳು ಮೇಲ್ದರ್ಜೆಗೇರಲಿವೆ.