ದೇಶಅಸೆಂಬ್ಲಿ ವಿಶೇಷ ಅಧಿವೇಶನ ಹಿನ್ನೆಲೆ: ಸಿಎಂ ಶಿಂಧೆಯೊಂದಿಗೆ ಮುಂಬೈ ತಲುಪಿದ ಶಿವಸೇನಾ ಬಂಡಾಯ ಶಾಸಕರು
ಅಸ್ಸಾಂನಿಂದ ವಾಪಸ್ಸಾದ ಬಳಿಕ ಗೋವಾದಲ್ಲಿ ತಂಗಿದ್ದ ಶಿವಸೇನಾ ಬಂಡಾಯ ಶಾಸಕರು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಮುಂಬೈ ತಲುಪಿದರು. ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಶನಿವಾರ ಪಕ್ಷ ವಿರೋಧಿ ಚಟುವಟಿಕೆಗಾಗಿ ಏಕನಾಥ್ ಶಿಂಧೆ ಅವರನ್ನು ಪಕ್ಷದಿಂದ ಅಮಾನತುಗೊಳಿಸದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.