reaction

ಟಿಕೆಟ್ ಸಿಕ್ಕಿದ ಖುಷಿಯಲ್ಲಿ ಆರ್. ಶಂಕರ್ ಕಣ್ಣೀರು: ಎಚ್.ವಿಶ್ವನಾಥ್ ಅಳಲು ಕೇಳೋರು ಯಾರು?
ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಸಿಗುತ್ತಿದ್ದಂತೆ ಮಾಜಿ ಸಚಿವ ಆರ್. ಶಂಕರ್ ಗಳಗಳನೆ ಕಣ್ಣೀರು ಹಾಕಿದ್ದಾರೆ. ಸಂತೋಷದಿಂದ ಕಣ್ಣೀರು ಹಾಕಿದ ಅವರು ಕ್ಷೇತ್ರದ ಜನರನ್ನು ನೆನಪಿಸಿಕೊಂಡರು. ತಮ್ಮನ್ನು ಪಕ್ಷೇತರ ಶಾಸಕನಾಗಿ ಗೆಲ್ಲಿಸಿದ್ದ ಜನರಿಗೆ ಕೃತಜ್ಞನಾಗಿದ್ದೇನೆ. ಮತ್ತೆ ಅವರ ಸೇವೆ ಮಾಡಲು ಅವಕಾಶ ಸಿಕ್ಕಿದೆ.

'ವೀರ ಸೈನಿಕರ ತ್ಯಾಗ ವ್ಯರ್ಥವಾಗಬಾರದು; ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು'
ದೇಶಕ್ಕಾಗಿ ಬೆವರು - ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ , ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದ್ದು, ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

ತೊಂದರೆ ಕೊಡಬೇಡಿ; ಏಕಪಕ್ಷೀಯ ಕ್ರಮ ಸರಿಯಲ್ಲ: ಭಾರತಕ್ಕೆ ಚೀನಾ ಎಚ್ಚರಿಕೆ
ಪೂರ್ವ ಲಡಾಕ್ ನಲ್ಲಿ ನಿನ್ನೆ ರಾತ್ರಿ ಕರ್ನಲ್ ಸೇರಿದಂತೆ ಮೂವರು ಭಾರತೀಯ ಯೋಧರನ್ನು ಹತ್ಯೆಗೈದ ಬಳಿಕ, ಏಕಪಕ್ಷೀಯ ಕ್ರಮಗಳನ್ನು ಕೈಗೊಳ್ಳದಂತೆ ಅಥವಾ ತೊಂದರೆ ಕೊಡದಂತೆ ಚೀನಾ ವಿದೇಶಾಂಗ ಸಚಿವಾಲಯ ಭಾರತಕ್ಕೆ ಎಚ್ಚರಿಕೆ ನೀಡಿದೆ.

ಲಾಕ್ ಡೌನ್ ಮುಂದುವರಿಕೆ ಕುರಿತ ವರದಿಗಳು ಕಪೋಲಕಲ್ಪಿತ: ಕೇಂದ್ರ ಗೃಹಸಚಿವಾಲಯ
ಮೇ 31ಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶಾದಾದ್ಯಂತ ಜಾರಿಗೊಳಿಸಿದ ಲಾಕ್‌ಡೌನ್ ಐದನೇ ಅವಧಿಗೂ ವಿಸ್ತರಿಸುವುದೆಂಬ ವರದಿಗಳನ್ನು ನಿರಾಕರಿಸಿರುವ ಗೃಹ ವ್ಯವಹಾರಗಳ ಸಚಿವಾಲಯ ಇದು ಸಂಪೂರ್ಣ ಸುಳ್ಳು ಎಂದು ಹೇಳಿದೆ

ಆತ್ಮ ನಿರ್ಭರ್ ಭಾರತ್ ” ಪ್ಯಾಕೇಜ್‍ನ ಐದನೇ ಹಂತ ಆರ್ಥಿಕ ಸುಧಾರಣೆಗೆ ಒತ್ತು-ಯಡಿಯೂರಪ್ಪ
ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್‍ನ 5 ನೇ ದಿನದ ಘೋಷಣೆಗಳು, ಕಾರ್ಮಿಕರಿಗೆ ಉದ್ಯೋಗ ಸೃಜನೆ, ಆರೋಗ್ಯ, ಶಿಕ್ಷಣ ಕ್ಷೇತ್ರದ ಸುಧಾರಣೆಗಳು, ಕೈಗಾರಿಕೆ ವಲಯದ ಕಾನೂನು ಸುಧಾರಣೆ ಹಾಗೂ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಗೆ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿಪ್ರಾಯ ಪಟ್ಟಿದ್ದಾರೆ.

ನ್ಯಾಯಸಮ್ಮತವಾಗಿ ಮೈಮುಲ್ ಹುದ್ದೆಗಳ ನೇಮಕವಾಗಲಿ: ಸಾ.ರಾ. ಮಹೇಶ್ ಆರೋಪಕ್ಕೆ ಜಿಟಿಡಿ ಪ್ರತಿಕ್ರಿಯೆ
ಮೈಮುಲ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸಾ. ರಾ ಮಹೇಶ್ ಅವರೇ ಪ್ರಯತ್ನಿಸಿದ್ದರು. ಹುದ್ದೆಗಳ ನೇಮಕಾತಿ ವೇಳೆ ಜನಪ್ರತಿನಿಧಿಗಳ ಮೇಲೆ ಒತ್ತಡಗಳು ಬರುವುದು ಸರ್ವೇ ಸಾಮಾನ್ಯ. ಆದರೂ ನ್ಯಾಯಸಮ್ಮತವಾಗಿ ಹುದ್ದೆಗಳ ನೇಮಕಾತಿ ಮಾಡಬೇಕು

ರೈತ, ದಿನಗೂಲಿಗಳಿಗೆ ವಿಶೇಷ ಪ್ಯಾಕೇಜ್ ಇಲ್ಲದಿರುವುದು ನಿರಾಸೆ: ಸಿದ್ದರಾಮಯ್ಯ
ಕೊರೋನ ಸಂಕಷ್ಟ ನಿವಾರಣೆಗಾಗಿ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಸಂಕಷ್ಟದಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡದಿರುವುದು ನಿರಾಸೆ ತಂದಿದೆ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಕೃಷಿಗೆ ಒತ್ತು ನೀಡಿದ ಸಮಗ್ರ ಬಜೆಟ್- ಬಿ. ಸಿ. ಪಾಟೀಲ್
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿರುವ ಬಜೆಟ್ ಕೃಷಿಗೆ ಪೂರಕವಾಗಿದ್ದು ಇದು ರೈತರ ಅಭಿವೃದ್ಧಿಗೆ ಮಂಡಿಸಿದ ಸಮಗ್ರ ಬಜೆಟ್ ಆಗಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ

ಅಮೂಲ್ಯಾಗೆ ನಕ್ಸಲ್ ನಂಟು? ವಿಚಾರಣೆ ವೇಳೆ ಆರೋಪಿ ಅಮೂಲ್ಯಾ ಹೇಳಿದ್ದೇನು?
ನಾನು ತಪ್ಪು ಮಾಡಿಲ್ಲ ಎಂದು ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ್ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾಳೆ.

